More

    ಮುಷ್ಕರದ ಭಿತ್ತಿಪತ್ರ ಬಿಡುಗಡೆ

    ಸುಂಟಿಕೊಪ್ಪ: ಕಾನೂನುಬದ್ಧ ಕನಿಷ್ಠ ವೇತನ ಸೇರಿದಂತೆ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಫೆ. 14 ರಂದು ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ಮುಷ್ಕರದ ಭಿತ್ತಿಪತ್ರವನ್ನು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಭರತ್ ಕುಮಾರ್ ಬಿಡುಗಡೆಗೊಳಿಸಿದರು.

    ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ನೌಕರರನ್ನು ಭೇಟಿಯಾ ಭಿತ್ತಿ ಪತ್ರಗಳನ್ನು ಹಂಚಿದರು.

    ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರ, ಕ್ಲರ್ಕ್, ಡೇಟಾ ಎಂಟ್ರಿ ಆಪರೇಟರ್, ನೀರುಗಂಟಿಗಳನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು. ದಿನನಿತ್ಯದ ಬೆಲೆ ಏರಿಕೆ ಅನುಸಾರವಾಗಿ ಕನಿಷ್ಠ ವೇತನ 25,000 ರೂ. ನಿಗದಿಪಡಿಸಬೇಕು ಎಂಬುದು ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದರು. ಪಂಚಾಯಿತಿ ಪೌರಕಾರ್ಮಿಕರು ಭಿತಿಪತ್ರವನ್ನು ಪ್ರದರ್ಶಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts