More

    ಮುಸ್ಲಿಂ ಮಹಿಳೆಯರಿಗೆ ವಿಶೇಷ ಆರೋಗ್ಯ ಸೇವೆ

    ಚಿಕ್ಕೋಡಿ: ಮುಸ್ಲಿಂ ಮಹಿಳೆಯರಿಗೆ ವಿವಿಧ ಕಾಯಿಲೆಗಳ ಚಿಕಿತ್ಸೆಗೆ ವಿಶೇಷ ಆರೋಗ್ಯ ಸೇವೆಯಡಿ ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆಯಡಿ 1 ಲಕ್ಷ ರೂ. ನೀಡಲಾಗುತ್ತಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

    ಪಟ್ಟಣದ ಹೊಸಪೇಟ ಗಲ್ಲಿಯ ಮುಸ್ಲಿಮರ ಸ್ಮಶಾನ ಭೂಮಿ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದ ಅವರು, ಅನಾರೋಗ್ಯದಿಂದ ಬಳಲುತ್ತಿರುವವರು ಯೋಜನೆ ಲಾಭ ಪಡೆದು ಗುಣಮುಖರಾಗಬೇಕು ಎಂದರು.

    ಮುಜರಾಯಿ ಹಾಗೂ ವಕ್ಫ್ ಇಲಾಖೆಯಿಂದ 10 ಲಕ್ಷ ರೂ. ಅನುದಾನ ಸ್ಮಶಾನ ಭೂಮಿಗೆ ಕಾಂಪೌಂಡ್ ನಿರ್ಮಾಣಕ್ಕೆ ಮಂಜೂರಾಗಿದೆ. ಮುಸ್ಲಿಮರಿಗಾಗಿ ಕೇಂದ್ರ-ರಾಜ್ಯ ಸರ್ಕಾರ ಸಾಕಷ್ಟು ಯೋಜನೆ ಜಾರಿಗೆ ತಂದಿದೆ. ಮಂದಿರಗಳಂತೆ ಈದ್ಗಾ ಮೈದಾನಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದರು.

    ಹಬ್ಬದ ಸಂದರ್ಭದಲ್ಲಿ ಪ್ರಾರ್ಥನೆ ಮಾಡುವ ಈದ್ಗಾ ಮೈದಾನದ ಸುತ್ತ ಕಾಂಪೌಂಡ್ ನಿರ್ಮಿಸುವಂತೆ ಜನರ ಬೇಡಿಕೆಯಾಗಿದ್ದು, ಮನವಿ ಮೇರೆಗೆ ಕಾಂಪೌಂಡ್ ನಿರ್ಮಾಣ ಮಾಡಲಾಗುವುದು ಎಂದರು.

    ಸಂಸದ ಅಣ್ಣಾಸಾಹೇಬ ಜೊಲ್ಲೆ, ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ, ಉಪಾಧ್ಯಕ್ಷ ಸಂಜಯ ಕವಟಗಿಮಠ, ಚಿಕ್ಕೋಡಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಾಂಭವಿ ಅಶ್ವತ್ಥಪುರ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅದಮ ಗಣೇಶವಾಡಿ, ಸಂತೋಷ ಜೊಗಳೆ, ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ ದಾಡಿವಾಲೆ, ಉಪಾಧ್ಯಕ್ಷ ಶಬ್ಬಿರ್ ಮುಲ್ಲಾ, ವಿಶ್ವನಾಥ ಕಾಮಗೌಡ, ಸಿದ್ದಪ್ಪ ಡಂಗೇರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts