More

    ಮೂರು ಎಕರೆ ಕಬ್ಬು ನಾಶ

    ಹಾನಗಲ್ಲ: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮೂರು ಎಕರೆಗಿಂತ ಹೆಚ್ಚು ಪ್ರದೇಶದಲ್ಲಿದ್ದ ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ತಾಲೂಕಿನ ಬೊಮ್ಮನಹಳ್ಳಿ ಹೋಬಳಿಯ ಮಾಸನಕಟ್ಟಿ ಗ್ರಾಮದ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

    ತಾಲೂಕಿನ ನಿಸ್ಸೀಮ ಆಲದಕಟ್ಟಿ ಗ್ರಾಮದ ನಿವಾಸಿ ಶಿವಪ್ಪ ನಿಂಗಪ್ಪ ಕತ್ತಿ ಎಂಬ ರೈತರಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ನಡೆದಿದೆ. ಮಾಸನಕಟ್ಟಿ ಗ್ರಾಮದ ಸರಹದ್ದಿನಲ್ಲಿರುವ 4 ಎಕರೆ 27 ಗುಂಟೆ ಜಮೀನಿನಲ್ಲಿ ಕಬ್ಬು ಬೆಳೆದಿದ್ದ ರೈತ ಶಿವಪ್ಪ ಕತ್ತಿ, ಕೆಲವೇ ದಿನಗಳಲ್ಲಿ ಕಬ್ಬು ಕಟಾವು ಮಾಡಿ ಸಂಗೂರು ಸಕ್ಕರೆ ಕಾರ್ಖಾನೆಗೆ ಸಾಗಿಸುವ ಸಿದ್ಧತೆಯಲ್ಲಿದ್ದರು. ಆದರೆ, ಶನಿವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿ ಮೂರು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಆಹುತಿಯಾಗಿ ಪಾರ ಪ್ರಮಾಣದ ನಷ್ಟವಾಗಿದೆ.

    ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಿಸಿದರೂ ಬೆಂಕಿಯ ಕೆನ್ನಾಲಿಗೆಗೆ ಮೂರು ಎಕರೆ ಕಬ್ಬಿನ ಬೆಳೆ ಸುಟ್ಟು ಕರಕಲಾಗಿತ್ತು. ಆಕಸ್ಮಿಕ ಬೆಂಕಿಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬೊಮ್ಮನಹಳ್ಳಿ ಹೋಬಳಿ ಕೃಷಿ ಅಧಿಕಾರಿ ಪ್ರಿಯಾಂಕ ಬೆಟಗೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts