More

    ಮೂರು ವರ್ಷದಲ್ಲಿ ಅಭಿವೃದ್ಧಿಗಾಗಿ ರೂ. 65 ಕೋಟಿ ವೆಚ್ಚ

    ಕಡೂರು: ಕಳೆದ ಮೂರು ವರ್ಷಗಳಲ್ಲಿ 5 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 65 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಸಲಾಗಿದೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದರು. ನಿಡಘಟ್ಟ ಗ್ರಾಮದ ಶ್ರೀ ವೀರಾಂಜನೇಯ ಸ್ವಾಮಿ ಸಮುದಾಯಭವನದಲ್ಲಿ  ಮೆಸ್ಕಾಂನ ಉಜ್ವಲ ಭಾರತ ಉಜ್ವಲ ಭವಿಷ್ಯ ಪವರ್-2047 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರ ವಿದ್ಯುತ್ ಕ್ಷೇತ್ರದಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿದೆ. ರಾಜ್ಯ ಸರ್ಕಾರ ಪ್ರತಿ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂಬ ನಿಟ್ಟಿನಲ್ಲಿ ಬೆಳಕು ಯೋಜನೆ ಜಾರಿಗೊಳಿಸಿದೆ ಎಂದರು. ಅಕ್ರಮ ಪಂಪ್​ಸೆಟ್​ಗಳನ್ನು ಸಕ್ರಮಗೊಳಿಸಲು ಹಾಗೂ ಪರಿವರ್ತಕಗಳನ್ನು ಅಳವಡಿಸಿಕೊಡುವಂತೆ ಮನವಿಗಳು ಬಂದಿವೆ. ಬೆಳಕು ಯೋಜನೆಯಡಿ ಬಾಕಿ ಉಳಿದಿರುವ ಫಲಾನುಭವಿಗಳ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಯಾವುದೇ ದೂರುಗಳು ಬಾರದಂತೆ ಎಚ್ಚರಿಕೆಯಿಂದ ಕಾರ್ಯ ಪೂರ್ಣಗೊಳಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.  ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಜನಸಾಮಾನ್ಯರಿಗೆ ಸಮರ್ಪಕವಾದ ವಿದ್ಯುತ್ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಜನರು ಅವಕಾಶಗಳಿಂದ ವಂಚಿತರಾಗಬಾರದು. ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯ ದೊರಕಬೇಕು ಎಂಬುದು ಸರ್ಕಾರದ ಉದ್ದೇಶ. ಪ್ರತಿ ಗ್ರಾಮಕ್ಕೂ ನಿರಂತರ ವಿದ್ಯುತ್ ದೊರಕಬೇಕು ಎಂಬುದು ಸರ್ಕಾರದ ಉದ್ದೇಶ. ಇದಕ್ಕೆ ಜನಸಾಮಾನ್ಯರ ಸಹಕಾರವೂ ಅಗತ್ಯ. ಅಧಿಕಾರಿಗಳೊಂದಿಗೆ ಕೈಜೋಡಿಸಿ ಯೋಜನೆಗಳ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಗ್ರಾಮೀಣ ವಿದ್ಯುದೀಕರಣ ನಿಗಮದ ವ್ಯವಸ್ಥಾಪಕಿ ಮೋನಿಷಾ ಬರ್ವಶರ್ವ, ಮೆಸ್ಕಾಂ ಮುಖ್ಯ ಇಂಜಿನಿಯರ್ ಬಸಪ್ಪ, ಮೆಸ್ಕಾಂ ಅಧಿಕ್ಷಕ ಸೋಮಶೇಖರ್, ಎಇ ಎಂ.ಎಸ್.ನಂದೀಶ್, ಜಿಪಂ ಮಾಜಿ ಉಪಾಧ್ಯಕ್ಷ ಜಿ.ಎನ್.ವಿಜಯ್ಕುಮಾರ್, ಗ್ರಾಪಂ ಅಧ್ಯಕ್ಷೆ ಗೀತಾಂಜಲಿ ಸುರೇಶ್, ಚಟ್ನಳ್ಳಿಮಹೇಶ್, ನಿಡಘಟ್ಟ ಲೋಕೇಶ್, ಲಕ್ಷ್ಮ್ಮ್ನಾಯ್್ಕ , ಜೆಇಗಳಾದ ಮಂಜೇಗೌಡ, ಪ್ರಸನ್ನ, ಶಿವಕುಮಾರ್, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts