More

    ಮೂರು ವರ್ಷದ ಹೆಣ್ಣು ಚಿರತೆ ಸೆರೆ

    ಅರಸೀಕೆರೆ: ತಾಲೂಕಿನ ಬಾಣಾವರ ಹೋಬಳಿ ಮನಕತ್ತೂರು ಗ್ರಾಮದ ಸರಹದ್ದಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಲಾಗಿದ್ದ ಬೋನಿಗೆ ಶುಕ್ರವಾರ ಮೂರು ವರ್ಷದ ಹೆಣ್ಣು ಚಿರತೆ ಬಿದ್ದಿದೆ.

    ಕಳೆದ ಕೆಲ ತಿಂಗಳಿನಿಂದ ಚಿರತೆ ಆತಂಕ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಜನ, ಜಾನುವಾರುಗಳ ರಕ್ಷಣೆಗೆ ಮುಂದಾಗುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಲ್ಲಿ ಮನವಿ ಮಾಡಿದ್ದರು. ಚಿರತೆಯ ಜಾಡು ಹಿಡಿದಿದ್ದ ಪ್ರಭಾರ ವಲಯ ಅರಣ್ಯಾಧಿಕಾರಿ ಹೇಮಂತ್ ಹಾಗೂ ಮತ್ತವರ ಸಿಬ್ಬಂದಿ ಸೆರೆಗೆ ಬೋನು ಇರಿಸಿದ್ದರು. ಆಹಾರ ಅರಸಿ ಬಂದಿದ್ದ ಹೆಣ್ಣು ಚಿರತೆ ಕೊನೆಗೂ ಸೆರೆಯಾಗಿದ್ದು, ಸ್ಥಳೀಯರು ನಿಟ್ಟುಸಿರು ಬಿಡುವಂತಾಗಿದೆ.

    ಚಿರತೆ ಬೋನಿಗೆ ಬಿದ್ದ ಸುದ್ದಿ ಕಾಳ್ಗಿಚ್ಚಿನಂತೆ ಹಬ್ಬಿದ ಹಿನ್ನೆಲೆಯಲ್ಲಿ ಮನಕತ್ತೂರು, ಶಾನೆಗೆರೆ, ಯರೇಹಳ್ಳಿ, ತೊಂಡಿಗನಹಳ್ಳಿ, ಉಪ್ಪಿನಹಳ್ಳಿ, ಮಲ್ಲಾಪುರ ಸೇರಿ ಕೆಲ ಸುತ್ತಮುತ್ತಲ ಗ್ರಾಮಸ್ಥರು ದೌಡಾಯಿಸಿ ಕುತೂಹಲದಿಂದ ನೋಡುತ್ತಿದ್ದ ದೃಶ್ಯ ಕಂಡು ಬಂದಿತು. ಸದ್ಯ ಚಿರತೆಯನ್ನು ಸ್ಥಳಾಂತರಿಸಿದ್ದು, ರಕ್ಷಿತಾರಣ್ಯಕ್ಕೆ ರವಾನಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts