More

    ಮೂಲಸೌಕರ್ಯದಿಂದ ಬುರ್ಲಟ್ಟಿ ಗ್ರಾಮ ವಂಚಿತ

    ಅಥಣಿ ಗ್ರಾಮೀಣ, ಬೆಳಗಾವಿ: ಕುಡಿಯುವ ನೀರು, ಕಸ ವಿಲೇವಾರಿ ಸೇರಿ ಅನೇಕ ಮೂಲ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿರುವ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮಸ್ಥರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ.
    ಕಟಗೇರಿ ಗ್ರಾಪಂಗೆ ಒಳಪಡುವ ಬುರ್ಲಟ್ಟಿ ಗ್ರಾಮದಲ್ಲಿ 2,563 ಜನಸಂಖ್ಯೆ ಇರುವ ಗ್ರಾಮದಲ್ಲಿ ಸಿ.ಸಿ ರಸ್ತೆ ಮಾಡಲಾಗಿದೆ. ಆದರೆ, ಒಳಚರಂಡಿ ವ್ಯವಸ್ಥೆ ಮಾಡದಿರುವುದರಿಂದ ಮನೆಗಳಲ್ಲಿ ಬಳಸಿದ ನೀರು ರಸ್ತೆ ಮಧ್ಯೆದ ಮೂಲಕ ಹನುಮಾನ ದೇವಸ್ಥಾನ ಹಾಗೂ ಬಸ್ ನಿಲ್ದಾಣದಲ್ಲಿ ನೀರು ಸಂಗ್ರಹಗೊಂಡು ದುರ್ನಾತ ಬೀರುತ್ತಿದೆ.

    ಗ್ರಾಮದಲ್ಲಿ ಸಾರ್ವಜನಿಕ ಶೌಚಗೃಹ ಇಲ್ಲದಿರುವುದರಿಂದ ಗ್ರಾಮಸ್ಥರು ಶಾಲೆ ಎದುರಿನ ರಸ್ತೆ ಬದಿಯಲ್ಲಿ ಬಹಿರ್ದೆಸೆಗೆ ಹೋಗುವುದು ಅನಿವಾರ್ಯವಾಗಿದೆ. ಜತೆಗೆ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಕೊರತೆಯಿಂದ ಅನೇಕ ತಿಂಗಳಿಂದ ಕೆಟ್ಟು ನಿಂತಿದೆ. ಇನ್ನೂ ಜೆ.ಜೆ.ಎಂ ಯೋಜನೆಯಡಿ ಪೈಪ್‌ಲೈನ್ ಮೂಲಕ ನೀರು ಒದಗಿಸಲೆಂದು ಮನೆ ಮನೆಗೆ ನಳ ಜೋಡಣೆ ಮಾಡಲಾಗಿದೆ. ಆದರೆ, ಅದರಿಂದ ಕೂಡ ಇಲ್ಲಿಯವರೆಗೆ ಹನಿ ನೀರು ಪೂರೈಕೆಯಾಗಿಲ್ಲ. ಶುದ್ಧ ಕುಡಿಯುವ ನೀರಿಗೆ ಬೇರೆ ಗ್ರಾಮಗಳಿಗೆ ಹೋಗುವುದು ಅನಿವಾರ್ಯವಾಗಿದೆ.

    ಗ್ರಾಮದಲ್ಲಿರುವ ಸಮಸ್ಯೆಗಳ ಬಗ್ಗೆ ಅನೇಕ ಬಾರಿ ಗ್ರಾಪಂ ಸದಸ್ಯರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೆ ಪ್ರಯೋಜನವಾಗುತ್ತಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮದ ಸಮಸ್ಯೆಗಳನ್ನು ಬಗೆಹರಿಸಿ ಮೂಲ ಸೌಕರ್ಯಕ್ಕೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಗ್ರಾಪಂ ಎದುರು ಧರಣಿ ಪ್ರಾರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts