More

    ಮೂಲಸೌಕರ್ಯ ಕಲ್ಪಿಸಲು ಸೂಚನೆ

    ಕೋಲಾರ: ಮುಜರಾಯಿ ದೇವಾಲಯಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೂಲಸೌಲಭ್ಯಗಳನ್ನು ಕಲ್ಪಿಸಲು ಇಲಾಖಾಽಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

    ತಾಲೂಕಿನ ಸೀತಿ ಶ್ರೀ ಪತ್ತೇಶ್ವರ ಸ್ವಾಮಿ ಮತ್ತು ಬೈರವೇಶ್ವ ಸ್ವಾಮಿ ದೇವಾಲಯದಲ್ಲಿ ಅನ್ನದಾಸೋಹ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಮಹಿಳೆಯರಿಗೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿದಾಗಿನಿಂದ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿದ್ದು, ದೇವಾಲಯಗಳಿಗೆ ಶಕ್ತಿ ತುಂಬಿದಂತಾಗಿದೆ ಎಂದರು.
    ದೇವಾಲಯಕ್ಕೆ ಬೇರೆ ಬೇರೆ ಜಿಲ್ಲೆಗಳಲ್ಲಿ ಮತ್ತು ಬೆಂಗಳೂರಿನಲ್ಲಿ ಹೆಚ್ಚಿನ ಭಕ್ತರು ಇದ್ದು ಪ್ರತಿದಿನವೂ ಭಕ್ತರು ಬಂದು ದರ್ಶನ ಪಡೆಯುತ್ತಾರೆ. ಕೆಲವು ಭಕ್ತರು ಭಕ್ತಿಯಿಂದ ತಮ್ಮ ಸ್ವಂತ ಹಣದಿಂದ ಆರ್ಥಿಕ ಸಹಾಯದಿಂದ ದೇವಾಲಯವನ್ನು ಅಭಿವೃದ್ಧಿಪಡಿಸಲಾಗಿದೆ. ಸಮಿತಿಯವರು ಸಮರ್ಪಕವಾಗಿ ನಿರ್ವಹಣದ ಜತೆಗೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ತಿಳಿಸಿದರು.

    ಗ್ರಾಮದಲ್ಲಿರುವ ದೇವಾಲಯಕ್ಕೆ ಮತ್ತು ಶಾಲೆಗೆ ಕೈಜೋಡಿಸುವುದರಿಂದ ಗ್ರಾಮದಲ್ಲಿ ಶಾಂತಿ ಮತ್ತು ಯುವಕರಿಗೆ ಶಿಕ್ಷಣ ನೀಡಿದಂತಾಗುತ್ತದೆ. ಸರ್ಕಾರದಿಂದ ಮುಂದಿನ ದಿನಗಳಲ್ಲಿ ಈ ದೇವಾಲಯವನ್ನು ಅಭಿವೃದ್ಧಿಪಡಿಸಲು ಸಹಕಾರ ನೀಡಬೇಕು ಎಂದು ಹೇಳಿದರು.
    ರಾಜ್ಯದಲ್ಲಿ ಸರ್ಕಾರವು ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಮಟ್ಟದಲ್ಲಿ ಈಗಾಗಲೇ ಚರ್ಚೆ ನಡೆದಿದೆ. ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು, ಇದಕ್ಕೆ ಸ್ಥಳೀಯ ಸಂಸ್ಥೆಗಳು, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೋರಿದರು.
    ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಿ.ಮುನೇಗೌಡ ಮಾತನಾಡಿ, ಸೀತಿ ದೇವಾಲಯವು ಪುರಾತನ ಕಾಲದ್ದಾಗಿದ್ದು, ವಿಶೇಷ ಪ್ರವಾಸಿತಾಣವಾಗಿ ಪ್ರಸಿದ್ಧಿಪಡಿದಿದೆ. ದೇವಾಲಯಕ್ಕೆ ಬರುವ ಭಕ್ತರು ಮೂಲಸೌಕರ್ಯಗಳು ಇಲ್ಲದೆ ಸಂಕಷ್ಟ ಎದುರಿಸುತ್ತಿದ್ದರು. ಇದನ್ನ ಮನಗಂಡು ಭಕ್ತರ, ದಾನಿಗಳ ನೆರವಿನಿಂದ ಅಭಿವೃದ್ಧಿಪಡಿಸಿದ್ದು, ದಿನನಿತ್ಯ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇವೆ ಎಂದು ಹೇಳಿದರು.
    ಮುಜರಾಯಿ ಇಲಾಖೆ ತಹಸೀಲ್ದಾರ್ ಸುಜಾತಾ, ತಹಶೀಲ್ದಾರ್ ಹರ್ಷವರ್ಧನ್, ಪದಾಽಕಾರಿಗಳಾದ ಚೌಡಪ್ಪ, ಬಾಲಕೃಷಣ್, ವೆಂಕಟೇಶ್, ಲಕ್ಷ್ಮಣ್‌ಗೌಡ, ಉಷಾರಾಣಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts