More

    ಮೂಲಸೌಲಭ್ಯ ಕಲ್ಪಿಸಲು ಬದ್ಧ


    ಯಾದಗಿರಿ: ಮತಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ಧಿ ನನ್ನ ಮೊದಲ ಆದ್ಯತೆಯಾಗಿದೆ. ಅಧಿಕಾರಿಗಳು ನನ್ನ ವೇಗಕ್ಕೆ ತಕ್ಕಂತೆ ಕೆಲಸ ಮಾಡಬೇಕು ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಸೂಚಿಸಿದರು.

    ಕ್ಷೇತ್ರದ ಹೊರಟೂರು, ಮಳ್ಳಳ್ಳಿ, ಉಳ್ಳ್ಳೆಸೂಗುರು ಹಾಗೂ ತೇಕರಾಳ ಗ್ರಾಮಗಳಲ್ಲಿ ಆಯೋಜಿಸಿದ್ದ ಶಾಸಕರ ನಡೆ, ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮೀಣ ಜನತೆ ನಿತ್ಯ ತಮ್ಮ ಸಮಸ್ಯೆ ಹೊತ್ತುಕೊಂಡು ಜಿಲ್ಲಾಕೇಂದ್ರಕ್ಕೆ ಬರುವುದು ಬೇಡ ಎಂಬ ಕಾರಣಕ್ಕೆ ನಾನೇ ನಿಮ್ಮೂರಿಗೆ ಬರುತ್ತಿದ್ದೇನೆ. ನಿಮ್ಮ ಸಮಸ್ಯೆಗಳು ಹೇಳಿದರೆ, ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

    ಗ್ರಾಮಗಳ ಸಮಗ್ರ ಅಭಿವೃದ್ಧಿಯೇ ಕಾಂಗ್ರೆಸ್ ಸಕರ್ಾರದ ಮೂಲಮಂತ್ರ. ಹೀಗಾಗಿ ಗ್ರಾಮೀಣ ಪ್ರದೇಶಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯ ಶಿಕ್ಷಣದ ಗುಣಮಟ್ಟವನ್ನು ಸುಧಾರಣೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗಿದೆ. ಜತೆಗೆ ಶಾಲಾ ಕೋಣೆಗಳ ನಿಮರ್ಾಣ ದುರಸ್ತಿ ಮುಂತಾದವುಗಳ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುವುದು ಎಂದು ಹೇಳಿದರು.

    ಇದಲ್ಲದೆ ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂಬ ಮಹಾತ್ಮ ಗಾಂಧಿ ಅವರ ಕನಸಿನಂತೆ ಪ್ರತಿ ಹಳ್ಳಿಗಳಿಗೆ ಕುಡಿಯುವ ನೀರು, ರಸ್ತೆ, ನೈರ್ಮಲ್ಯ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು ಮತ್ತು ಸಕರ್ಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts