More

    ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ

    ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದಲ್ಲಿ ಚಲನಚಿತ್ರ ನಟ ರಮೇಶ ಅರವಿಂದ್, ಸಮಾಜೋ-ಧಾರ್ಮಿಕ ಕ್ಷೇತ್ರದ ಸಾಧಕಿ ಅಕ್ಕ ಅನ್ನಪೂರ್ಣಾತಾಯಿ, ನಗರಾಭಿವೃದ್ಧಿ ತಜ್ಞ ರವಿಚಂದರ್ ವೆಂಕಟರಾಮನ್ ಅವರಿಗೆ ಬುಧವಾರ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

    ಇಲ್ಲಿನ ಸುವರ್ಣ ವಿಧಾನಸೌಧ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಈ ಮೂವರು ಸಾಧಕರಿಗೆ ಡಾಕ್ಟರ್ ಆಫ್ ಸೈನ್ಸ್ ಪದವಿ ನೀಡಿ, ಗೌರವಿಸಿದರು. ಜತೆಗೆ ವಿವಿಧ ವಿಷಯಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಒಟ್ಟು 48 ಪಿಎಚ್.ಡಿ, 2,434 ಸ್ನಾತಕೋತ್ತರ, 40,034 ಪದವಿ, 13 ಪಿಜಿ ಡಿಪ್ಲೊಮಾ ಹಾಗೂ 80 ಸರ್ಟಿಫಿಕೇಟ್ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು.

    ವಿಶ್ವವಿದ್ಯಾಲಯದಿಂದ ಫಸ್ಟ್ ರ‌್ಯಾಂಕ್ ಪಡೆದ 6 ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಾಗೂ ವಿಷಯವಾರು ಅತಿ ಹೆಚ್ಚು ಅಂಕ ಗಳಿಸಿದ 4 ವಿದ್ಯಾರ್ಥಿನಿಯರು ಸೇರಿ ಒಟ್ಟು 11 ಸುವರ್ಣ ಪದಕಗಳನ್ನು ಪ್ರದಾನ ಮಾಡಲಾಯಿತು.

    ಬ್ಯಾಚುಲರ್ ಆಫ್ ಕಾಮರ್ಸ್ ವಿದ್ಯಾರ್ಥಿನಿ ವಿದ್ಯಾವತಿ ಗುಡೋಡಗಿ, ಬ್ಯಾಚುಲರ್ ಆಫ್ ಸೈನ್ಸ್ ವಿದ್ಯಾರ್ಥಿನಿ ದೀಪಿಕಾ ಚವ್ಹಾಣ, ಮಾಸ್ಟರ್ ಆಫ್ ಆರ್ಟ್ಸ್ ಇನ್ ಕನ್ನಡ ವಿದ್ಯಾರ್ಥಿನಿ ದಾಕ್ಷಾಯಿಣಿ ವಾಲ್ಮಿಕಿ, ಮಾಸ್ಟರ್ ಆಫ್
    ಆರ್ಟ್ಸ್ ಇನ್ ಸೋಷಿಯಾಲಜಿ ವಿದ್ಯಾರ್ಥಿ ತಾತ್ಯಾಸಾಬ ಧಾಬಡೆ, ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ ವಿದ್ಯಾರ್ಥಿನಿ ಗೌರಾ ಅಣೆಪ್ಪನವರ, ಮಾಸ್ಟರ್ ಆಫ್ ಸೈನ್ಸ್ ಇನ್ ಮ್ಯಾಥೆಮ್ಯಾಟಿಕ್ಸ್ ವಿದ್ಯಾರ್ಥಿನಿ ಅನುಜಾ ಪಾಟೀಲ ಸುವರ್ಣ ಹಾಗೂ ವಿಷಯವಾರು ಅತಿ ಹೆಚ್ಚು ಅಂಕಗಳಿಸಿದ ಸ್ನಾತಕ ವಿದ್ಯಾರ್ಥಿನಿಯರಾದ ರಸಿಕಾ ಮಲೈ (ಇಂಗ್ಲಿಷ್), ಸಂಜಿವೀನಿ ಪಾಟೀಲ ( ಕನ್ನಡ), ವರ್ಷಾ ಮರ್ಡಿ (ಸೋಷಿಯಾಲಜಿ), ಪ್ರೇರಣಾ ಪನಾಲ್ಕರ್(ಕಾಮರ್ಸ್) ಸುವರ್ಣ ಪದಕ ಪಡೆದುಕೊಂಡರು.

    ವಿಶ್ವವಿದ್ಯಾಲಯದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 163 ವಿದ್ಯಾರ್ಥಿಗಳಿಗೆ ರ‌್ಯಾಂಕ್ ಸರ್ಟಿಫಿಕೇಟ್ ನೀಡಲಾಯಿತು.

    ಜಯನಗರಂ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಡಾ.ತೇಜಸ್ವಿ ಕಟ್ಟಿಮನಿ, ಕುಲಪತಿ ಪ್ರೊ.ರಾಮಚಂದ್ರಗೌಡ, ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮೌಲ್ಯಮಾಪನ ಕುಲಸಚಿವ ಪ್ರೊ.ಶಿವಾನಂದ ಗೊರನಾಳೆ, ಕುಲಸಚಿವ ಪ್ರೊ.ಎಂ.ಹನುಮಂತಪ್ಪ, ಹಣಕಾಸು ಅಧಿಕಾರಿ ಪ್ರೊ.ಡಿ.ಎನ್.ಪಾಟೀಲ, ವಿವಿಯ ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯರು, ವಿದ್ಯಾರ್ಥಿಗಳು ಹಾಗೂ ಪಾಲಕರು ಘಟಿಕೋತ್ಸವದಲ್ಲಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts