ಮೇಕೆದಾಟು ಯೋಜನೆ ಕೈಗೆತ್ತಿಳ್ಳುವಂತೆ ಒತ್ತಾಯ

6HDK1
ಎಚ್.ಡಿ.ಕೋಟೆ ತಾಲೂಕಿನ ಕಬಿನ ಜಲಾಶಯದ ಪ್ರವಾಸಿ ಮಂದಿರದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು.
Published on

ಎಚ್.ಡಿ.ಕೋಟೆ: ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಬೇಕು, ಸಮುದ್ರಕ್ಕೆ ಹರಿಯುವ ಹೆಚ್ಚುವರಿ ಕಾವೇರಿ ನೀರನ್ನು ಬಳಸಿಕೊಳ್ಳಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.

ತಾಲೂಕಿನ ಕಬಿನಿ ಜಲಾಶಯದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ಕಾವೇರಿ ಅಂತಿಮ ತೀರ್ಪಿನಲ್ಲಿ ಸೂಚಿಸಿರುವ ತಮಿಳುನಾಡಿನ ಹಂಚಿಕೆ ನೀರನ್ನು ಹರಿಸಿ, ಹೆಚ್ಚುವರಿ ನೀರನ್ನು ರಾಜ್ಯಕ್ಕೆ ಬಳಸಿಕೊಳ್ಳಲು ಮೇಕೆದಾಟು ಅಣೆಕಟ್ಟೆ ನಿರ್ಮಿಸಲು ಸರ್ಕಾರ ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ತಮಿಳುನಾಡಿನ ಒತ್ತಡಕ್ಕೆ ಮಣಿಯಬಾರದು. ಕಬಿನಿ ಅಚ್ಚುಕಟ್ಟು ವ್ಯಾಪ್ತಿಗೆ ಬರುವ ಎರಡನೇ ಹಂತದ ಯೋಜನೆ ಹಾಗೂ ಏತ ನೀರಾವರಿ ಯೋಜನೆಗಳನ್ನು ಶರವೇಗದಲ್ಲಿ ಕಾರ್ಯಗತಗೊಳಿಸಬೇಕು ಎಂದು ಒತ್ತಾಯಿಸಿದರು.

ಗೋ ಹತ್ಯೆ ನಿಷೇಧ ಕಾಯ್ದೆ: ಪಶು ಸಂಗೋಪನೆ ಸಚಿವರು ಹಸು, ಕೋಣ ಎರಡನ್ನೂ ಹೋಲಿಕೆ ಮಾಡಿರುವುದು ಸರಿಯಲ್ಲ. ಹಸುಗಳು ರೈತರ ಬದುಕಿಗೆ ಆಸರೆಯಾಗಿ ಕಾಯಕ ಮಾಡುತ್ತವೆ. ನಾವು ಗೌರವ ಭಾವನೆಯಿಂದ ಪೂಜಿಸುತ್ತೇವೆ. ಇಂಥ ಪ್ರಾಣಿಗಳನ್ನು ಹತ್ಯೆ ಮಾಡಿದರೆ ಏನು ತಪು ಎಂದು ಹೇಳುವುದು ಒಪ್ಪುವಂತದ್ದಲ್ಲ. ಈ ರೀತಿಯ ಹೇಳಿಕೆ ಸಚಿವರಿಗೆ ಶೋಭೆ ತರುವುದಿಲ್ಲ ಎಂದರು.

ಕಾಡು ಪ್ರಾಣಿಗಳ ದಾಳಿ ಹಾವಳಿಯಿಂದ ಕಾಡಂಚಿನ ಭಾಗದ ರೈತರು ಭಯದಿಂದ ಬದುಕುವಂತಾಗಿದೆ. ಕಾಡಿನ ಒಳಗೆ ಇರುವ ಎಲ್ಲ್ಲ ರೆಸಾರ್ಟ್‌ಗಳು, ಮೋಜಿನತಾಣಗಳನ್ನು ಬಂದ್ ಮಾಡಲು ಹಾಗೂ ಗಣಿಗಾರಿಕೆಯನ್ನು ನಿಲ್ಲಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಅತ್ತಹಳ್ಳಿ ದೇವರಾಜ್, ಪಿ.ಸೋಮಶೇಖರ್, ಕೆಂಡಗಣ್ಣ ಸ್ವಾಮಿ, ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಬಿದರಹಳ್ಳಿ ಮಹೇಶ್, ಮಹಿಳಾ ಜಿಲ್ಲಾಧ್ಯಕ್ಷೆ ಕಮಲಮ್ಮ, ಲಕ್ಷ್ಮೀಪುರ ವೆಂಕಟೇಶ್, ಕುರುಬೂರು ಸಿದ್ದೇಶ್, ಹಂಪಾಪುರ ರಾಜೇಶ್, ಗೌರಿಶಂಕರ್ ಪ್ರದೀಪ್, ಕಿರಗಸೂರು ಪ್ರಸಾದ್ ನಾಯಕ, ಹೆಗ್ಗೂರು ರಂಗರಾಜ್, ಕಾಟೂರು ಮಹಾದೇವಸ್ವಾಮಿ, ಕೋಟೆ ಸುರೇಶ್ ಶೆಟ್ಟಿ, ಸುನಿಲ್ ಕುಮಾರ್, ಅಂಬಳೆ ಮಂಜುನಾಥ್, ಎಗ್ಗೊಟಾರ ಶಿವಸ್ವಾಮಿ, ಮಹಾದೇವು, ಚುಂಚರಾಯನಹುಂಡಿ ನಂಜುಂಡಸ್ವಾಮಿ, ಸಿದ್ದರಾಮ, ರಾಜೇಶ್, ಕರುವಟ್ಟಿ ಉಮೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net