More

    ಮೇಯರ್ ಆಯ್ಕೆಗೆ ಮೀಸಲಾತಿ ಅಡ್ಡಿ

    ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಆಯ್ಕೆಗೆ ಅಡ್ಡಿಯಾಗಿರುವ ಮೀಸಲಾತಿ ಸೇರಿ ಇತರ ಸಮಸ್ಯೆ ಇತ್ಯರ್ಥಪಡಿಸಿ ಶೀಘ್ರ ಮೇಯರ್ ಚುನಾವಣೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

    ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾನಗರ ಪಾಲಿಕೆಯ ಸದಸ್ಯರು ಆಯ್ಕೆಯಾಗಿ ಒಂದು ವರ್ಷ ಕಳೆದಿದೆ. ಆದರೆ, ಮೀಸಲಾತಿ ಕಾರಣದಿಂದಾಗಿ ಮೇಯರ್ ಮತ್ತು ಉಪಮೇಯರ್ ಆಯ್ಕೆ ವಿಳಂಬವಾಗಿದೆ. ಈ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗಿದ್ದು, ಕೆಲವೇ ದಿನಗಳಲ್ಲಿ ಸಮಸ್ಯೆ ಪರಿಹರಿಯಲಿದೆ ಎಂದರು.
    ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಜನದಟ್ಟಣೆ, ವಾಹನ ಸಂಚಾರ ದಟ್ಟಣೆ ಸಮಸ್ಯೆ ಪರಿಹರಿಸಲು ಪಾಲಿಕೆ, ನಗರ ಪೊಲೀಸ್ ಆಯುಕ್ತರು ಕೂಡಲೇ ಕ್ರಮ ವಹಿಸಬೇಕು. ಅಲ್ಲದೆ, ರಸ್ತೆ, ಚರಂಡಿ ಹಾಗೂ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡಿದ್ದರೆ ತಕ್ಷಣ ತೆರವುಗೊಳಿಸಬೇಕು. ಇದರಲ್ಲಿ ಪಾಲಿಕೆ ಅಧಿಕಾರಿಗಳು ನಿರ್ಲಕ್ಷಿಸುವಂತಿಲ್ಲ ಎಂದು ತಿಳಿಸಿದರು.
    ನಗರದಲ್ಲಿ ವಾಹನ ಪಾರ್ಕಿಂಗ್, ಒತ್ತುವರಿ ತೆರವು ಸೇರಿ ವಿವಿಧ ಸಮಸ್ಯೆ ಕುರಿತು ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಸರ್ಕಾರಿ, ಸಾರ್ವಜನಿಕ ಸ್ಥಳಗಳು ಒತ್ತುವರಿಯಾಗದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು. ಬಳ್ಳಾರಿ ನಾಲಾ ಒತ್ತುವರಿ ತೆರವುಗೊಳಿಸಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts