ಮೇ.4 ರಂದು ಒಳಮೀಸಲಾತಿ ಜಾಗೃತಿ ಸಭೆ

Ayyanpura Shivakumar
Published on

ಚಾಮರಾಜನಗರ: ಪ್ರಸ್ತುತ ನಾಗಮೋಹನ್ ದಾಸ್ ಸಮಿತಿ ಸಮೀಕ್ಷೆಗೆ ಬಲಗೈ ಸಮುದಾಯ ಯಾವ ಜಾತಿ ಎಂದು ಬರೆಯಿಸಬೇಕು ಎಂಬ ಬಗ್ಗೆ ಚರ್ಚೆ ಮಾಡಿ ನಿರ್ಣಯ ತೆಗೆದುಕೊಳ್ಳುವ ಉದ್ದೇಶದಿಂದ ಮೇ.4 ರಂದು ಎಸ್ಸಿ ಬಲಗೈ ಹೊಲಯ ಸಮುದಾಯದ ಸಭೆ ಕರೆಯಲಾಗಿದೆ ಎಂದು ದಲಿತ ಮುಖಂಡ ಅಯ್ಯನಪುರ ಶಿವಕುಮಾರ್ ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 10.30 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಯೋಜನಾ ಇಲಾಖೆಯ ನಿರ್ದೇಶಕ ಡಿ.ಚಂದ್ರಶೇಖರಯ್ಯ ವಿಚಾರ ಮಂಡನೆ ಮಾಡಲಿದ್ದಾರೆ. ಮೈಸೂರು ಗಾಂಧಿನಗರದ ಉರಿಲಿಂಗಿ ಪೆದ್ದಿ ಮಠದ ಶ್ರೀಜ್ಞಾನಪ್ರಕಾಶ ಸ್ವಾಮೀಜಿ ಸಾನಿಧ್ಯವಹಿಸಲಿದ್ದಾರೆ. ಸಂಸದ ಸುನೀಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ದರ್ಶನ್ ಧೃವನಾರಾಯಣ್, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಮಾಜಿ ಶಾಸಕರಾದ ಎನ್.ಮಹೇಶ್, ಜಿ.ಎನ್.ನಂಜುಂಡಸ್ವಾಮಿ, ಎಸ್.ಬಾಲರಾಜ್ ಹಾಗೂ ವಿವಿಧ ಸ್ಥಳೀಯ ಸಂಸ್ಥೆ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಈ ಜಾಗೃತಿ ಸಭೆಗೆ ಜಿಲ್ಲೆಯ ಪರಿಶಿಷ್ಟ ಜಾತಿ ಬಲಗೈ ಹೊಲಯ ಸಮುದಾಯದ ಯಜಮಾನರು, ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ದಲಿತ ಮುಖಂಡರಾದ ಆರ್.ಮಹದೇವ್, ನಲ್ಲೂರು ಸೋಮೇಶ್, ಮೂಡ್ನಕೂಡು ಪ್ರಕಾಶ್, ಸಿ.ಕೆ.ಮಂಜುನಾಥ್, ನಾಗವಳ್ಳಿ ನಾಗಯ್ಯ, ಸೋಮಣ್ಣ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net