More

    ಮೇ.5 ರಿಂದ ಮಂಗಳೂರಿಗೆ ನೀರು ಪೂರೈಕೆಯಲ್ಲಿ ರೇಷನಿಂಗ್

    ಮಂಗಳೂರು: ಮಳೆಗಾಲ ಆರಂಭ ವರೆಗೆ ಕುಡಿಯುವ ನೀರಿನ ಬವಣೆ ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಮಹಾನಗರಕ್ಕೆ ಮೇ 5 ರಿಂದಲೇ ನೀರು ಪೂರೈಕೆಯಲ್ಲಿ ರೇಷನಿಂಗ್ ಆರಂಭಿಸುವಂತೆ ಪಾಲಿಕೆ ಆಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆ ನಡೆಸಲಾಗಿದ್ದು, ಅದರಲ್ಲಿ ಬೇಸಗೆ ಮುಕ್ತಾಯ ವರೆಗೆ ಕುಡಿಯುವ ನೀರಿನ ಕೊರತೆ ತಲೆದೋರದಂತೆ ಎಚ್ಚರಿಕೆ ವಹಿಸುವಂತೆ ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ದಿನಬಿಟ್ಟು ದಿನ ನೀರು ಪೂರೈಕೆಗೆ ಕ್ರಮ ವಹಿಸಲಾಗುವುದು. ಅವಶ್ಯವಾದರೆ ಬಿಳಿಯೂರು, ಎಎಂಆರ್, ಹರೇಕಳ ಡ್ಯಾಂನಿಂದ ಹೆಚ್ಚುವರಿ ನೀರನ್ನು ತುಂಬೆ ಡ್ಯಾಂಗೆ ಬಿಡುವಂತೆ ಸೂಚಿಸಲಾಗಿದೆ. ಕೈಗಾರಿಕಾ ಪ್ರದೇಶಗಳಲ್ಲಿರುವ ಕುಟುಂಬಗಳಿಗೆ ಕುಡಿಯಲು ಮೂರು ದಿನಕ್ಕೊಮ್ಮೆ ನೀರು ಪೂರೈಸುವಂತೆ ಸೂಚಿಸಲಾಗಿದೆ ಎಂದರು.

    ದ.ಕ.ಜಿಲ್ಲೆಯ ಗ್ರಾಮೀಣ ಪ್ರದೇಶಗಳಾದ ವಿಟ್ಲ, ಕೋಟೆಕಾರು, ಉಳ್ಳಾಲ, ಸೋಮೇಶ್ವರಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಒಟ್ಟು 18 ಟ್ಯಾಂಕರ್‌ಗಳಲ್ಲಿ ನೀರು ಪೂರೈಸಲಾಗುತ್ತಿದೆ ಎಂದರು.

    ಮಳೆಗಾಲವನ್ನು ಎದುರಿಸಲು ಮುಂಜಾಗ್ರತಾ ವ್ಯವಸ್ಥೆಯನ್ನು ವಿಕೇಂದ್ರೀಕರಣಗೊಳಿಸಲಾಗಿದೆ. ನಗರ ಪ್ರದೇಶಗಳಲ್ಲಿ ವಾರ್ಡ್‌ಗಳು ಪ್ರಾಕೃತಿಕ ವಿಕೋಪ ತಂಡಗಳನ್ನು ಹೊಂದುವಂತೆ ಸೂಚಿಸಲಾಗಿದೆ. ಮೆಸ್ಕಾಂ, ರಾಷ್ಟ್ರೀಯ ಹೆದ್ದಾರಿ, ಮೀನುಗಾರಿಕೆ, ಕೋಸ್ಟ್‌ಗಾರ್ಡ್, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಎಲ್ಲ ವ್ಯವಸ್ಥೆಗಳನ್ನು ಆ್ಯಪ್ ಮೂಲಕ ನಿರ್ವಹಿಸಲಾಗುವುದು. ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ನೆರೆ ಪೀಡಿತ ಪ್ರದೇಶಗಳ ಮ್ಯಾಪ್ ಸಿದ್ಧಪಡಿಸುವಂತೆ ಸೂಚಿಸಲಾಗಿದ್ದು, ರಾಜಾ ಕಾಲುವೆ ಹೂಳೆತ್ತಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts