More

    ಮೇ 8ರವರೆಗೆ ರೇವಣ್ಣ ಎಸ್​ಐಟಿ ಕಸ್ಟಡಿಗೆ: ಜಡ್ಜ್​ ಕಟ್ಟಿಮನಿ ಆದೇಶ

    ಬೆಂಗಳೂರು: ಶಾಸಕ ಎಚ್​.ಡಿ.ರೇವಣ್ಣ ಅವರನ್ನು ಮೇ 8ರವರೆಗೆ ನಾಲ್ಕು ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿ ಜಡ್ಜ್​ ಆದೇಶ ನೀಡಿದ್ದಾರೆ.

    ಮಹಿಳೆಯ ಅಪಹರಣ ಪ್ರಕಾರಣದಲ್ಲಿ ಶಾಸಕ ಹಾಗೂ ಮಾಜಿ ಸಚಿವ ಎಚ್​.ಡಿ.ರೇವಣ್ಣ ಅವರನ್ನು ಎಸ್​ಐಟಿ ಕಸ್ಟಡಿಗೆ ನೀಡಿ ಜಡ್ಜ್​ ರವೀಂದ್ರ ಕಟ್ಟಿಮನಿ ಅವರು ಆದೇಶ ನೀಡಿದ್ದಾರೆ.

    ವೈದ್ಯಕೀಯ ತಪಾಸಣೆ ನಡೆಸಿದ ನಂತರ ಭಾನುವಾರ ಸಂಜೆ ಎಸ್​ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ ಜಡ್ಜ್​ ನಿವಾಸಕ್ಕೆ ಕರೆದೊಯ್ದಿದ್ದರು.

    ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸಲಾಗುತ್ತಿದೆ ಎಂದು ನ್ಯಾಯಾಧೀಶರ ಮುಂದೆ ರೇವಣ್ಣ ಹೇಳಿಕೆ ನೀಡಿದ್ದರು. ತದನಂತರ ನ್ಯಾಯಾಧೀಶರು ಅವರನ್ನು ಎಸ್​ಐಟಿ ಕಸ್ಟಡಿಗೆ ಹಸ್ತಾಂತರಿಸುವ ಆದೇಶ ನೀಡಿದರು.


    ಏನಿದು ಕಿಡ್ನಾಪ್ ಕೇಸ್?:

    ಪೆನ್​ ಡ್ರೈವ್​ನಲ್ಲಿ ಬಿಡುಗಡೆಯಾದ ಅಶ್ಲೀಲ ವಿಡಿಯೊದಲ್ಲಿ ತಮ್ಮ ತಾಯಿಯ ಚಿತ್ರವೂ ಇತ್ತು, ಬಳಿಕ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಈಗಾಗಲೇ ಎಸ್​ಐಟಿ ಬಂಧಿಸಿದೆ. ಇವರನ್ನು ಆರೋಪಿ ಸಂಖ್ಯೆ 2 ಎಂದು ಎಸ್​ಐಟಿ ಗುರುತಿಸಲಾಗಿದೆ. ರೇವಣ್ಣ ಅವರು ಮೊದಲ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ 20 ವರ್ಷದ ಪುತ್ರ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಮಹಿಳೆಯ ಪತ್ತೆಗಾಗಿ ನಂತರ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಕಿಡ್ನ್ಯಾಪ್ ಆದ ಮಹಿಳೆ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದು. ಬಳಿಕ ಎಸ್​ಐಟಿ ಅಧಿಕಾರಿಗಳು ಈ ಮಹಿಳೆಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ವಿಚಾರಣೆಗೊಳಪಡಿಸಿದ್ದಾರೆ. ಮಹಿಳೆ ಎಸ್​ಐಟಿ ಅಧಿಕಾರಿಗಳ ಮುಂದೆ ಗೊಂದಲದ ಹೇಳಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

    ಪಿಎಸ್​ಯು ಷೇರುಗಳ ಮೇಲೆ ದುಪ್ಪಟ್ಟಾದರೂ ಅಗ್ಗ: ಸರ್ಕಾರಿ ಕಂಪನಿ ಸ್ಟಾಕ್​ ಖರೀದಿಗೆ ತಜ್ಞರ ಸಲಹೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts