More

    ಮೈಸೂರು ಸಂಸ್ಥಾನದ ಭಾಗ್ಯವಿಧಾತ

    ಶ್ರೀರಂಗಪಟ್ಟಣ: ಸೂರ್ಯ, ಚಂದ್ರ ಇರುವವರೆಗೂ ಸರ್ ಎಂ.ವಿಶ್ವೇಶ್ವರಯ್ಯ ಹೆಸರು ಅಜರಾಮರವಾಗಿರಲಿದೆ. ಇದಕ್ಕೆ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳೇ ಸಾಕ್ಷಿ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿ.ಕೆ.ರವಿಕುಮಾರ್ ಚಾಮಲಪುರ ಸ್ಮರಿಸಿದರು.

    ಪಟ್ಟಣದ ಓಂ ಶ್ರೀನಿಕೇತನ ಟ್ರಸ್ಟ್ ಶಾಲೆ ಆವರಣದಲ್ಲಿ ತಾಲೂಕು ಕಸಾಪ ಏರ್ಪಡಿಸಿದ್ದ ವಿಶ್ವೇಶ್ವರಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯುತ್, ನೀರಾವರಿ, ಕೈಗಾರಿಕಾ ಕ್ರಾಂತಿಗೆ ಮುನ್ನಡಿ ಬರೆದ ಮಹಾನ್ ಸಾಧಕ. ಮೈಸೂರು ಸಂಸ್ಥಾನದ ಭಾಗ್ಯವಿಧಾತ. ವಿಜ್ಞಾನ, ತಂತ್ರಜ್ಞಾನದ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

    ಮೈಸೂರು ನಿವೃತ್ತ ಪ್ರಾಧ್ಯಾಪಕ ಗಣೇಶ ಸರ್ ಎಂವಿ ಕುರಿತು ಉಪನ್ಯಾಸ ನೀಡಿದರು. ಮೈಸೂರು ಮೂಡ ಕಾರ್ಯಪಾಲಕ ಇಂಜಿನಿಯರ್ ಸುನೀಲ್, ಶ್ರೀರಂಗಪಟ್ಟಣ ಪಂಚಾಯತ್ ರಾಜ್ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಡಿ.ಬಿ.ರಾಮಕೃಷ್ಣೇಗೌಡ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಹೇಶ್, ಪಾಂಡವಪುರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆರ್.ಆದರ್ಶ ಅವರಿಗೆ ಸರ್‌ಎಂವಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
    ಕಸಾಪ ತಾಲೂಕು ಅಧ್ಯಕ್ಷ ಬಲ್ಲೇನಹಳ್ಳಿ ಮಂಜುನಾಥ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ.ಜೆ.ಶ್ರೀನಿವಾಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎನ್.ಲೋಕೇಶ್, ಬಿಇಒ ಎಂ.ಆರ್ ಅನಂತರಾಜು, ಶ್ರೀರಂಗನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೇಗೌಡ, ಶಿಕ್ಷಣ ಸಂಯೋಜಕಿ ಡಾ.ಬಿ.ಕೆ.ಪ್ರತಿಮಾ, ಶಿಕ್ಷಕ ಚಂದ್ರ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts