More

    ಮೊದಲ ದಿನ ಸುಗಮ

    ಸೋಮವಾರಪೇಟೆ: ಕೋವಿಡ್-19 ಭೀತಿ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮೊದಲ ದಿನ ತಾಲೂಕಿನಲ್ಲಿ ಸುಗಮವಾಗಿ ನಡೆಯಿತು.
    ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯು ಪೂರ್ವ ತಯಾರಿ ಮಾಡಿಕೊಂಡಿತ್ತು. ತಾಲೂಕಿನ 11 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ತಿಳಿಸಿದ್ದಾರೆ.

    ಒಂದು ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರದಲ್ಲಿ 2 ಹೆಚ್ಚುವರಿ ಕೊಠಡಿ ಮೀಸಲಾಗಿದೆ. ಜ್ವರ ಲಕ್ಷಣಗಳು ಕಂಡು ಬಂದರೆ ಅವರಿಗೆ ಪ್ರತ್ಯೇಕವಾಗಿ ಬೇರೆ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಪ್ರತಿ ವಿದ್ಯಾರ್ಥಿಗಳಿಗೆ ಹ್ಯಾಂಡ್ ಸ್ಯಾನಿಟೈಸರ್ ಮತ್ತು ಮುಖ ಗವಸುಗಳನ್ನು ಇಲಾಖೆಯಿಂದ ನೀಡಲಾಗಿದೆ.

    ತಾಲೂಕಿನ 11 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2562 ವಿದ್ಯಾರ್ಥಿಗಳ ಪೈಕಿ, 2501 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. 61 ವಿದ್ಯಾರ್ಥಿಗಳು ಗೈರಾಗಿದ್ದಾರೆ. 28 ವಿದ್ಯಾರ್ಥಿಗಳು ಕಂಟೋನ್‌ಮೆಂಟ್ ವಲಯದಿಂದ ಬಂದು ಪರೀಕ್ಷೆ ಬರೆದರು. ಅನಾರೋಗ್ಯ ಕಾರಣದಿಂದ 7 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಹಾಗೂ 64 ವಲಸೆ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

    ಸೋಮವಾರಪೇಟೆ ಪಟ್ಟಣದಲ್ಲಿ 3 ಕಂಟೋನ್‌ಮೆಂಟ್ ವಲಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಸೋಮವಾರಪೇಟೆ ಪಟ್ಟಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕೊಠಡಿಗಳು ಮತ್ತು ಒಎಲ್‌ವಿ ಕಾನ್ವೆಂಟ್‌ನಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts