More

    ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ

    Must Read

    ಬೆಳಗಾವಿ:: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಹುದಲಿಯ ಬೆಳಗಾಂ ಶುಗರ್ಸ್ ಪ್ರೈ.ಲಿಮಿಟಡ್ ಮೋಡ ಬಿತ್ತನೆಗೆ ಮುಂದಾಗಿದ್ದು, ಮೋಡ ಬಿತ್ತನೆ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು.
    ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ(ಸೆ.29) ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು. ಮೋಡ ಬಿತ್ತನೆ ಕಾರ್ಯಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರ(ಡಿಜಿಸಿಎ) ಕಚೇರಿಯು ಗ್ರೀನ್ ಸಿಗ್ನಲ್ ನೀಡಿದೆ. ಸೆ.29 ಹಾಗೂ 30 ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. ಕ್ಯಾಪ್ಟನ್ ವೀರೇಂದ್ರ ಸಿಂಗ್ ಹಾಗೂ ಕ್ಯಾಪ್ಟನ್ ಆದರ್ಶ ಪಾಂಡೆ ನೇತೃತ್ವದಲ್ಲಿ ವಿಟಿ-ಕೆಸಿಎಂ ವಿಮಾನವು ಮೋಡ ಬಿತ್ತನೆ ಮಾಡಲಿದೆ. ಕಡಿಮೆ ಎತ್ತರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಎಸಿಎಲ್-2 ಅಯೋಡೈಡ್ ಹಾಗೂ 20 ಸಾವಿರ ಅಡಿ ಮೇಲೆ ಎತ್ತದರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಲ್ವರ್ ಐಯೋಡೈಡ್ ರಾಸಾಯನಿಕ ಸಿಂಪಡಿಸಲಾಗುತ್ತದೆ. ಒಂದು ವೇಳೆ ನಿರ್ದಿಷ್ಟ ಪ್ರದೇಶದ ವ್ಯಾಪ್ತಿಯಲ್ಲಿ ಮೋಡಗಳು ಇದ್ದರೆ ರಾಸಾಯನಿಕ ಸಿಂಪಡಣೆ ಮಾಡಿದ ಐದು ನಿಮಿಷಗಳಲ್ಲಿ ಮಳೆ ಬರಬಹುದು.

    ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ

    ಒಂದು ವೇಳೆ ಮೋಡಗಳು ಇರದಿದ್ದಲ್ಲಿ ಹಾಗೇ ಹಿಂದಿರುಗಲಾಗುತ್ತದೆ ಎಂದು ಮೋಡ ಬಿತ್ತನೆ ವಿಮಾನದ ತಾಂತ್ರಿಕ ಸಿಬ್ಬಂದಿ ತಿಳಿಸಿದರು. ಬೆಳಗಾವಿಯಲ್ಲಿ ಮೋಡಗಳು ಕಂಡುಬಂದಿರುವುದರಿಂದ ಮೋಡ ಬಿತ್ತನೆಗೆ ಪೂರಕ ವಾತಾವರಣವಿದೆ ಎಂದು ಹೇಳಿದರು. 5 ರಿಂದ 10 ಸಾವಿರ ಅಡಿಗಳ ಮೇಲೆ ಮೋಡಗಳನ್ನು ಆಕರ್ಷಿಸಲು ಸಿಲ್ವರ್ ಐಯೋಡೈಡ್ ರಾಸಾಯನಿಕವನ್ನು ಆಗಸದಲ್ಲಿ ಸಿಂಪಡಣೆ ಮಾಡಲಾಗುತ್ತದೆ ಎಂದು ಸಂಸ್ಥೆಯ ಅಧಿಕಾರಿಗಳು ವಿವರಿಸಿದರು.ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಶಾಸಕ ಆಸಿಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ರಾಹುಲ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.

    - Advertisement -spot_img
    - Advertisement -spot_img

    Latest News

    ಪ್ರಜ್ವಲ್‌ ರೇವಣ್ಣ ಪ್ರಕರಣ; ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸುವಂತಿಲ್ಲ; ಕೋರ್ಟ್‌ ತಡೆಯಾಜ್ಞೆ

    ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದೆ. ಎಸ್​​ಐಟಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಈ ಪ್ರಕರಣದ...
    - Advertisement -spot_img

    More Articles Like This

    - Advertisement -spot_img