More

    ಮೋದಿಯಿಂದ ದೇಶಕ್ಕೆ ಜಾಗತಿಕ ಮನ್ನಣೆ

    ಗೋಕಾಕ: ದೇಶದಲ್ಲಿ 60 ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಮಾಡದ ಅಭಿವೃದ್ಧಿಯನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇವಲ 9 ವರ್ಷದಲ್ಲಿ ಮಾಡಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.

    ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಹೊಂದುತ್ತ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಮನ್ನಣೆ ಪಡೆಯುತ್ತಿದೆ ಎಂದರು.

    ಕರೊನಾ ಸಂಕಷ್ಟದಲ್ಲಿ ಪ್ರಪಂಚವೇ ಕೊಂಡಾಡುವ ನಿಟ್ಟಿನಲ್ಲಿ 130 ಕೋಟಿ ದೇಶವಾಸಿಗಳಿಗೆ ಉಚಿತ ವ್ಯಾಕ್ಸಿನ್ ನೀಡುವ ಜತೆಗೆ ನಮ್ಮ ನೆರೆಹೊರೆಯ ರಾಷ್ಟ್ರಗಳಿಗೂ ವ್ಯಾಕ್ಸಿನ್ ನೀಡುವ ಮೂಲಕ ಮಾನವೀಯತೆ ಮೆರೆದರು. ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಮತ್ತು ಉತ್ತಮ ಆಡಳಿತ ಸಾಧ್ಯ ಎಂದು ಜನತೆಗೆ ಗೊತ್ತಾಗಿದೆ ಎಂದರು.

    ಸಚಿವ ಮುರುಗೇಶ ನಿರಾಣಿ ಮಾತನಾಡಿ, ರಾಜ್ಯದಲ್ಲಿ ಸಾಲ ಮನ್ನಾ ಮಾಡಿದ ಪ್ರಥಮ ಪಕ್ಷ ಬಿಜೆಪಿ. ಮಹಿಳೆಯರ ಶಿಕ್ಷಣಕ್ಕೆ ವಿಶೇಷ ಯೋಜನೆ ರೂಪಿಸಲಾಗಿದೆ. ಎಸ್‌ಸಿ ಮತ್ತು ಎಸ್‌ಟಿ ಜನರಿಗೆ ಕೈಗಾರಿಕೆ ಪ್ರಾರಂಭಿಸಲು ಜಮೀನು ಖರೀದಿಗೆ ಶೇ.75 ಸಬ್ಸಿಡಿ ನೀಡಲಾಗುತ್ತಿದ್ದು, ಇದನ್ನು ಸದುಪಯೋಗಪಡೆದುಕೊಳ್ಳಬೇಕು ಎಂದರು.

    ಶಾಸಕ ರಮೇಶ ಜಾರಕಿಹೊಳಿ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಒಟ್ಟು 15 ಸ್ಥಾನ ಗೆಲ್ಲಿಸುವ ಸಂಕಲ್ಪ ಮಾಡಿದ್ದು, ಇದಕ್ಕೆ ನಿಮ್ಮ ಸಹಕಾರ ಅಗತ್ಯ. ಉತ್ತರ ಕರ್ನಾಟಕದ ನೀರಾವರಿ ಅಭಿವೃದ್ಧಿಗಾಗಿ ಈಗಾಗಲೇ 5,700 ಕೋಟಿ ರೂ. ಮಂಜೂರು ದೊರೆತಿದ್ದು, ಇನ್ನೂ 9 ಸಾವಿರ ಕೋಟಿ ರೂ. ಅನುದಾನದ ಬಿಡುಗಡೆಯೊಂದಿಗೆ ಉತ್ತರ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಶ್ರಮಿಸಲಾಗುವುದು ಎಂದರು.

    ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಶಾಸಕ ಅನಿಲ ಬೆನಕೆ, ಮಾಜಿ ವಿಪ ಸದಸ್ಯ ಅರುಣ ಶಹಪುರ, ಸಹಸಂಚಾಲಕ ವಿವೇಕ ಡಬ್ಬಿ, ಮಹಾಂತೇಶ ಬಾಳಿಕಾಯಿ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಸುಭಾಷ ಪಾಟೀಲ, ಮಲ್ಲಿಕಾರ್ಜುನ ಮಾದನ್ನವರ, ಮಾಜಿ ಶಾಸಕರಾದ ಶಶಿಕಾಂತ ನಾಯ್ಕ, ಎಂ.ಎಲ್.ಮುತ್ತೆನ್ನವರ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಸ್ಥಾಯಿ ಸಮಿತಿ ಚೇರ್ಮನ್ ಸಿದ್ದಪ್ಪ ಹುಚ್ಚರಾಮಗೋಳ, ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ, ಎಂ.ಎಲ್.ತೋಳಿನವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts