More

    ಮೋದಿಯಿಂದ ದೇಶ ಗೆಲ್ಲಿಸುವ ರಾಜಕಾರಣ

    ಯಲ್ಲಾಪುರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸ್ಕ್ಯಾಮ್ಳ ಮೂಲಕ ಪ್ರಚಲಿತದಲ್ಲಿತ್ತು. ಮೋದಿ ಅಧಿಕಾರಕ್ಕೆ ಬಂದ ಮೇಲೆ ಸ್ಕೀಮ್ಳ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.

    ಪಟ್ಟಣದ ಎಪಿಎಂಸಿ ರೈತ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲೆಯ ಘಟ್ಟದ ಮೇಲಿನ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಸ್ವಚ್ಛ ಭಾರತ, ಜನಧನ ಖಾತೆ, ಕಿಸಾನ್ ಸಮ್ಮಾನ್, ವಿಮೆ ಸೇರಿ ಅನೇಕ ಯೋಜನೆಗಳ ಮೂಲಕ ದೇಶದ ಪ್ರಗತಿಯ ದಿಕ್ಕನ್ನು ಬದಲಿಸಿದೆ. ಮೋದಿಯವರು ದೇಶವನ್ನು ಗೆಲ್ಲಿಸುವ ರಾಜಕಾರಣ ಮಾಡುತ್ತಿದ್ದಾರೆ ಎಂದರು.

    ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಕಾಂಗ್ರೆಸ್ ಅನಗತ್ಯವಾಗಿ ಪಠ್ಯ ಪರಿಷ್ಕರಣೆಗೆ ಮುಂದಾಗಿದ್ದು, ಶಿಕ್ಷಣ ವ್ಯವಸ್ಥೆ ಹಾಳುಗೆಡವುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಮಾಜಿ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಬಿಜೆಪಿ ವಿರೋಧ ಪಕ್ಷವಾಗಿ, ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಜನಜಾಗೃತಿ ಮೂಡಿಸಿ, ಹೋರಾಟದ ಮೂಲಕ ಜನರಿಗೆ ನ್ಯಾಯ ದೊರಕಿಸಿಕೊಡಲಿದೆ ಎಂದರು.

    ಶಾಸಕ ಶಿವರಾಮ ಹೆಬ್ಬಾರ, ಎಂಎಲ್​ಸಿಗಳಾದ ಕೋಟ ಶ್ರೀನಿವಾಸ ಪೂಜಾರಿ, ಶಾಂತಾರಾಮ ಸಿದ್ದಿ, ಕೇಶವ ಪ್ರಸಾದ, ಮಾಜಿ ಸಚಿವ ಪ್ರಮೋದ ಮಧ್ವರಾಜ, ಮಾಜಿ ಶಾಸಕರಾದ ಸುನೀಲ ಹೆಗಡೆ, ರೂಪಾಲಿ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯ್ಕ, ಪ್ರಮುಖರಾದ ಪ್ರಮೋದ ಹೆಗಡೆ, ಸುನಂದಾ ದಾಸ್, ಪ್ರಸನ್ನ ಕೆರೆಕೈ, ಗಿರೀಶ ಪಟೇಲ, ಉಷಾ ಹೆಗಡೆ, ಗುರುಪ್ರಸಾದ ಹೆಗಡೆ ಇತರರಿದ್ದರು.

    ಕೈ ಕೊಟ್ಟ ಕರೆಂಟ್: ಕಾರ್ಯಕ್ರಮದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡುತ್ತಿರುವ ವೇಳೆ ವಿದ್ಯುತ್ ವ್ಯತ್ಯಯ ಉಂಟಾಯಿತು. ಆ ವೇಳೆ 200 ಯುನಿಟ್ ವಿದ್ಯುತ್ ಬಳಕೆ ಆಗಿರಬೇಕು, ಅದಕ್ಕೆ ಕರೆಂಟ್ ತೆಗೆದರು ಎಂದು ಸಿ.ಟಿ. ರವಿ ಹಾಗೂ ಆರಗ ಜ್ಞಾನೇಂದ್ರ ಲೇವಡಿ ಮಾಡಿ, ಕಾರ್ಯಕರ್ತರನ್ನು ನಗೆಗಡಲಲ್ಲಿ ತೇಲಿಸಿದರು.

    ರಾಜ್ಯದಲ್ಲಿ 28 ಸ್ಥಾನ ಗೆಲ್ಲಲಿದೆ ಬಿಜೆಪಿ

    ಹೊನ್ನಾವರ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ದೇಶದಲ್ಲಿ 350ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿಶ್ವಾಸ ವ್ಯಕ್ತಪಡಿಸಿದರು.

    ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಒಂದು ಸಾವಿರ ವಿಶಿಷ್ಟ, ಪ್ರಭಾವಶಾಲಿ ವ್ಯಕ್ತಿಗಳ ಸಂಪರ್ಕ ಗುರಿ ಹೊಂದಲಾಗಿದೆ. ಫಲಾನುಭವಿಗಳ ಸಮಾವೇಶ ನಡೆಯುತ್ತದೆ. ಸೋಶಿಯಲ್ ಮೀಡಿಯಾ ಬ್ಲಾಗರ್ಸ್, ಬುದ್ಧಿಜೀವಿಗಳ ಜತೆ ಸಂವಾದ ನಡೆಸುತ್ತೇವೆ. ಸಂಯುಕ್ತ ಮೋರ್ಚಾ ಸಮಾವೇಶ, ಪ್ರತಿ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆ ನಡೆಸುತ್ತೇವೆ. ಅಂತಿಮವಾಗಿ ಪ್ರತಿ ಮನೆ ಮನೆಯನ್ನು ತಲುಪುವ ಯೋಜನೆ ಇದೆ ಎಂದರು.

    ಕಾಂಗ್ರೆಸ್ ಪಕ್ಷ ಚುನಾವಣೆ ಪೂರ್ವ ದರ ಏರಿಕೆ ಬಗ್ಗೆ ಜನರಿಗೆ ಏಕೆ ಹೇಳಿಲ್ಲ. ಯಾವುದನ್ನು ಹೇಳದೆ ಜನರಿಗೆ ಮೋಸ ಮಾಡಿದರು. ತಂದಂತಹ ಯೋಜನೆಯಲ್ಲಿಯೂ ಗೊಂದಲ ಮೂಡಿಸಿದರು. ರಾಜ್ಯಕ್ಕೆ ಈಗ ಅಕ್ಕಿ ನೀಡುತ್ತಿರುವವರು ಪ್ರಧಾನಿ ಮೋದಿಯವರೇ ವಿನಃ ಸಿದ್ದರಾಮಯ್ಯನವರಲ್ಲ ಎಂದರು.

    ಗೋ ರಕ್ಷಣೆ ಮಾಡಬೇಕಾದ ರಾಜ್ಯ ಕಾಂಗ್ರೆಸ್​ನ ಪಶುಸಂಗೋಪನೆ ಸಚಿವರು ಗೋಹತ್ಯೆ ಕಾಯ್ದೆ ವಾಪಸ್ ಪಡೆಯುತ್ತಿದ್ದಾರೆ. ಒತ್ತಾಯಪೂರ್ವಕ ಮತಾಂತರವನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ. ಇದಕ್ಕೆ ಪೂರಕ ಎಂಬಂತೆ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುತ್ತಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts