More

    ಮೋದಿ ಒಳ ಮೀಸಲು ಪರ

    ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಒಳ ಮೀಸಲು ಸೌಲಭ್ಯ ಪರವಿದ್ದು, ಖಂಡಿತ ಜಾರಿಯಾಗಲಿದೆ. ಇದೇ ವಿಚಾರವಾಗಿ ಸುಪ್ರೀಂ ಕೋರ್ಟ್‌ನ 7 ಸದಸ್ಯ ನ್ಯಾಯಮೂರ್ತಿಗಳ ಪೀಠ 2024ರ ಜ. 17ರಂದು ವಿಚಾರಣೆ ಕೈಗೆತ್ತಿಕೊಳ್ಳಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿ, ಸಾಮಾಜಿಕ ನ್ಯಾಯದ ಪರ ಬಿಜೆಪಿ, ಸಂಘ ಪರಿವಾರವಿದೆಯೇ ಹೊರತು ಅಧಿಕಾರಕ್ಕಾಗಿ ಅಂಟಿಕೊಂಡಿಲ್ಲ. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಈ ಹಿಂದೆ ಚಿತ್ರದುರ್ಗಕ್ಕೆ ಭೇಟಿ ನೀಡಿ ಒಳ ಮೀಸಲು ವಿಚಾರವಾಗಿ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರೊಂದಿಗೆ ಚರ್ಚಿಸಿದ್ದರು. ಮಾಹಿತಿ ಸಂಗ್ರಹಿಸಿ, ಪ್ರಧಾನಿ ಅವರಿಗೂ ಸಲ್ಲಿಸಿದ್ದಾರೆ. 32 ವರ್ಷದ ಹೋರಾಟಕ್ಕೆ ಖಂಡಿತ ನ್ಯಾಯ ಸಿಗಲಿದೆ ಎಂದು ಭರವಸೆ ನೀಡಿದರು.

    ರಾಜ್ಯದಲ್ಲಿ ಗೂಂಡಾಗಿರಿ ಹೆಚ್ಚಳವಾಗಿದೆ. ಪುಡಾರಿಗಳಿಗೆ ಕಾಂಗ್ರೆಸ್ ಸರ್ಕಾರದ ಬೆಂಬಲವಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪ ಮಾಡಿದರು.

    ದೀನ ದಲಿತರು, ಸ್ತ್ರೀಯರು, ರೈತರಿಗೆ ರಕ್ಷಣೆ ಇಲ್ಲ. ದಲಿತರನ್ನು ಕಾಂಗ್ರೆಸ್ ಕೀಳಾಗಿ ಕಾಣುತ್ತಿದೆ. ಹೀಗಾಗಿ ದೌರ್ಜನ್ಯ ಮುಂದುವರಿದಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಮತ್ತು ಆತನ ಸಹಚರರು ನಡೆಸಿದ ಹಲ್ಲೆ, ಮಹಿಳೆಯನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಹೊಡೆದಿರುವು, ಯಲವಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಶೌಚಗುಂಡಿಗೆ ಇಳಿಸಿದ್ದು, ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿನಿಯರು ಸ್ನಾನ ಮಾಡುವ ವಿಡಿಯೋ ಚಿತ್ರಿಸುವ ಅಮಾನವೀಯ ಪ್ರಕರಣಗಳೇ ಇದಕ್ಕೆ ನಿದರ್ಶನ ಎಂದು ಕಿಡಿಕಾರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts