More

    ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಪಣ ತೊಡಿ


    ಯಾದಗಿರಿ: ಕಳೆದ ಹತ್ತು ವರ್ಷಗಳಲ್ಲಿ ಭಾರತದ ದೇಶ ಹಿಂದೆಂದೂ ಕಾಣದ ಅಭಿವೃದ್ಧಿ ಕಾಣುತ್ತಿದ್ದು, ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯುಳ್ಳ ಯೋಜನೆಗಳೇ ಕಾರಣ ಎಂದು ಎಂಎಲ್ಸಿ ಡಿ.ಎಸ್.ಅರುಣ ತಿಳಿಸಿದರು.
    ನಗರದ ಎಸ್ಡಿಎನ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಮಾತನಾಡಿ, ಇಡೀ ಜಗತ್ತು ಇಂದು ಭಾರತದ ಅಭಿವೃದ್ಧಿಯತ್ತ ಗಮನ ಹರಿಸುತ್ತಿದೆ. ಒಂದು ಕಾಲದಲ್ಲಿ ವಿಶ್ವದ ದೊಡ್ಡಣ್ಣ ಎಂದು ಕರೆಸಿಕೊಂಡಿದ್ದ ಅಮೇರಿಕಾ ಹಾಗೂ ಇತರೇ ದೇಶದ ಅಧ್ಯಕ್ಷರು ನಮ್ಮ ದೇಶಕ್ಕೆ ಬರಬೇಕಾದರೆ ಹಿಂದೆಮುಂದೆ ನೋಡುತ್ತಿದ್ದರು. ಆದರೆ, ಅದೇ ರಾಷ್ಟ್ರಗಳು ಇಂದು ಭಾರತ ನಮಗೆ ಯಾವಾಗ ಕರೆಯುತ್ತದೆ ಎಂದು ಕಾಯುವಂತಾಗಿದೆ ಎಂದರು.

    ಪಕ್ಷದ ಹಾಗೂ ಸಂಘಟನೆಯ ಹಿರಿಯ ನಾಯಕರ ಎಷ್ಟೋ ವರ್ಷಗಳ ತಪಸ್ಸು, ಕನಸು ನನಸಾಗುತ್ತಿದೆ. ಎಲ್ಕೆ ಅಡ್ವಾಣಿಯವರ ರಾಮರಾಜ್ಯದ ಕನಸು ಮತ್ತು ಜನಸಂಘದ ಸಂಸ್ಥಾಪಕ ಶ್ಯಾಮ ಪ್ರಸಾದ ಮುಖಜರ್ಿಯವರ ಆಟರ್ಿಕಲ್ 370 ರದ್ದು ಇದೆಲ್ಲವುದನ್ನು ನೋಡುವ ಸೌಭಾಗ್ಯ ನಮಗೆ ದೊರೆತಿದೆ. ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿ ಮಾಡಲು ಹಾಗೂ ಅವರ ಕೈ ಬಲಪಡಿಸಲು ಹೆಚ್ಚಿನ ಶ್ರಮ ವಹಿಸಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

    ರಾಜಕೀಯ ಕ್ಷೇತ್ರದಲ್ಲಿ ಕಾರ್ಯಕರ್ತರ ನಡೆ-ನುಡಿ, ನಡವಳಿಕೆಯನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ರಾಜಕಾರಣ ಉತ್ತಮ ದಿಕ್ಕಿನಲ್ಲಿ ಸಾಗುತ್ತಿದೆ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ ನಾನು ನನ್ನ ಕುಟುಂಬ ತಂದೆ,ತಾಯಿಗೆ ಯಾವುದೇ ಹೊರೆಯಾಗದ ರೀತಿಯಲ್ಲಿ ಕುಟುಂಬಕ್ಕೂ ಸಮಯ ನೀಡಿ, ಹೆಚ್ಚಿನ ಸಮಯವನ್ನು 2-3 ತಿಂಗಳು ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮೋದಿ ಅವರನ್ನು ಹೆಚ್ಚಿನ ಬೆಂಬಲದೊಂದಿಗೆ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಶ್ರಮಿಸಬೇಕು ಎಂದು ಸಲಹೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts