More

    ಮೌಢ್ಯ ನಿಷೇಧ ಕಾನೂನು ಜಾರಿಯಾಗಲಿ: ವಿಜ್ಞಾನ ಸಮ್ಮೇಳನದಲ್ಲಿ ನಿರ್ಣಯ

    ಮೈಸೂರು: ರಾಜ್ಯದಲ್ಲಿ ಮೌಢ್ಯ ನಿಷೇಧ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು 14ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನವು ನಿರ್ಣಯ ತೆಗೆದುಕೊಂಡಿದೆ.
    ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಮುಕ್ತಗಂಗೋತ್ರಿಯ ಘಟಿಕೋತ್ಸವ ಭವನದಲ್ಲಿ ಶನಿವಾರ ಆಯೋಜಿಸಿದ್ದ ಸಮ್ಮೇಳನದ ಸಮಾರೋಪ ಕಾರ್ಯಕ್ರಮದಲ್ಲಿ 11 ನಿರ್ಣಯಗಳನ್ನು ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಯಿತು. ಇವುಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು.

    ವಿದ್ಯಾರ್ಥಿಗಳನ್ನು ಖಗೋಳ ವಿಜ್ಞಾನದೆಡೆಗೆ ಆಕರ್ಷಿಸುವ ನಿಟ್ಟಿನಲ್ಲಿ ಸಂಚಾರಿ ತಾರಾಲಯ ಯೋಜನೆ ಸದೃಢಗೊಳಿಸಬೇಕು.

    ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ ಸ್ಥಾಪಿಸಬೇಕು. ಅದನ್ನು ಬಳಸಿಕೊಂಡು ಮಕ್ಕಳಿಗೆ ಕಲಿಸಲು ವಿಜ್ಞಾನ ಶಿಕ್ಷಕರಿಗೆ ತರಬೇತಿ ನೀಡಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಬೇಕು.

    ಏಕಬಳಕೆ ಪ್ಲಾಸ್ಟಿಕ್ ಅನ್ನು ದೇಶಾದ್ಯಂತ ನಿಷೇಧಿಸಿದ್ದರೂ ಹಲವೆಡೆ ಇನ್ನೂ ಬಳಕೆಯಾಗುತ್ತಿದ್ದು, ಮಾರಾಟಗಾರರು ಹಾಗೂ ತಯಾರಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು.
    *ಪಶ್ಚಿಮ ಘಟ್ಟಗಳಲ್ಲಿನ ಅರಣ್ಯ ರಕ್ಷಣೆಗೆ ಹಾಗೂ ಅಲ್ಲಿ ಅರಣ್ಯೀಕರಣಕ್ಕೆ ವಿಶೇಷ ಯೋಜನೆ ಅನುಷ್ಠಾನಗೊಳಿಸಬೇಕು. ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ಪಠ್ಯೇತರ ಚಟುವಟಿಕೆಯ ಭಾಗವಾಗಿ ವಿದ್ಯಾರ್ಥಿಗಳಿಗೆ ಕೆರೆ ಸಮೀಕ್ಷೆ ಅಧ್ಯಯನ ನಡೆಸಲು ವಿಶೇಷ ಕಾರ್ಯಕ್ರಮ ಸಿದ್ಧಪಡಿಸಬೇಕು. ಕೆರೆಗಳ ಅತಿಕ್ರಮಣ ವಿರುದ್ಧ ಕಠಿಣ ಕ್ರಮ ವಹಿಸಬೇಕು.
    *ಮಹಿಳೆಯರು ವಿಜ್ಞಾನ ಕ್ಷೇತ್ರದಲ್ಲಿ ಅದರಲ್ಲೂ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಪೂರಕವಾದ ವಾತಾವರಣ ನಿರ್ಮಿಸಬೇಕು.
    *ಜೇಮ್ಸ್ ವೆಬ್ ದೂರದರ್ಶಕ ಮಾದರಿಯಂತೆ ಇಸ್ರೋದಿಂದಲೂ ಬಾಹ್ಯಾಕಾಶ ದೂರದರ್ಶಕ ಉಡಾವಣೆಗೆ ಅನುದಾನ ನೀಡಬೇಕು.
    *ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಅನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆ ಎಂದು ಪರಿಗಣಿಸಿ ವಾರ್ಷಿಕ ಅನುದಾನ ನೀಡಬೇಕು.

    *ಅಖಿಲ ಕರ್ನಾಟಕ ಕನ್ನಡ ವಿಜ್ಞಾನ ಸಮ್ಮೇಳನವನ್ನು ಪ್ರತಿ ವರ್ಷ ಒಂದೊಂದು ಜಿಲ್ಲೆಯಲ್ಲಿ ಆಯೋಜಿಸಲು ಕನ್ನಡ ಸಾಹಿತ್ಯ ಸಮ್ಮೇಳನದ ಮಾದರಿಯಲ್ಲಿ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕು.

    ಪ್ರಶಸ್ತಿ ಪ್ರದಾನ
    ವಿಜ್ಞಾನ ಜನಪ್ರಿಯಗೊಳಿಸಲು ಶ್ರಮಿಸಿದ ಮೈಸೂರಿನ ಸಿಎಫ್‌ಟಿಆರ್‌ಐ ನಿವೃತ್ತ ವಿಜ್ಞಾನಿ ಶ್ರೀಮತಿ ಹರಿಪ್ರಸಾದ್, ಬೆಂಗಳೂರಿನ ವಿಜ್ಞಾನ ಸಂವಹನಕಾರ ಪ್ರೊ.ಎಂ.ಆರ್.ನಾಗರಾಜು, ವಿಜಯಪುರದ ನಿವೃತ್ತ ಪ್ರಾಧ್ಯಾಪಕ ಪ್ರೊ.ಡಿ.ಆರ್.ಬಳೂರಗಿ ಮತ್ತು ಕುಲಬುರಗಿಯ ಶಿಕ್ಷಣ ತಜ್ಞ ಪ್ರೊ.ಬಿ.ಕೆ.ಚಳಗೇರಿ ಅವರಿಗೆ ಪರಿಷತ್ತಿನಿಂದ ಇದೇ ಮೊದಲಿಗೆ ರಾಜ್ಯಮಟ್ಟದ ಡಾ.ಎಚ್.ನರಸಿಂಹಯ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts