More

    ಮೌಲ್ಯಗಳಿಂದಲೇ ಮಾನವ ಹಕ್ಕುಗಳ ರಕ್ಷಣೆ- ಡಾ.ಎ. ಚನ್ನಪ್ಪ 

    ದಾವಣಗೆರೆ: ಮಾನವೀಯ ಮೌಲ್ಯಗಳ ವೃದ್ಧಿಯಿಂದ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳನ್ನು ತಡೆಗಟ್ಟಬಹುದು ಎಂದು ಜಿ.ಪಂ. ಸಿಇಒ ಡಾ.ಎ. ಚನ್ನಪ್ಪ ಹೇಳಿದರು.

    ಜಿಲ್ಲಾಡಳಿತದ ತುಂಗಭದ್ರಾ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದ ಬಳಿಕ ಮಾತನಾಡಿದರು.
    ಸಮಾಜದಲ್ಲಿ ಮನುಷ್ಯ ಘನತೆಯಿಂದ ಬದುಕು ಸಾಗಿಸಲು ಬೇಕಿರುವ ಮೂಲ ಅವಶ್ಯಕತೆಗಳನ್ನು ಪಡೆಯುವುದು ಆತನ ಹಕ್ಕು. ಇದಕ್ಕೆ ತೊಡಕಾದಲ್ಲಿ, ಅದು ಮಾನವ ಹಕ್ಕುಗಳ ಉಲ್ಲಂಘನೆಯಾದಂತೆ ಆಗಲಿದೆ. ಪ್ರತಿ ವ್ಯಕ್ತಿಗೂ ಗೌರವ ನೀಡುವುದು ನಮ್ಮ ಕರ್ತವ್ಯ, ಅಧಿಕಾರಿಗಳು ಇದಕ್ಕೆ ಚ್ಯುತಿ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಹೇಳಿದರು.
    ಸಕಾಲಕ್ಕೆ ನ್ಯಾಯ ಸಿಗದಿದ್ದರೂ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಸಾಮಾಜಿಕ ಹಾಗೂ ಆರ್ಥಿಕ ಅಸಮಾನತೆ ಇದಕ್ಕೆ ಮುಖ್ಯ ಕಾರಣವಾಗಿದೆ. ಇಂದಿನ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿರುವುದು ದುರಂತ ಸಂಗತಿ ಎಂದು ವಿಷಾದಿಸಿದರು.
    ವಿಶೇಷ ಉಪನ್ಯಾಸ ನೀಡಿದ ಹಿರಿಯ ವಕೀಲ ಎಲ್.ಎಚ್. ಅರುಣಕುಮಾರ್, ಪೊಲೀಸ್ ಇಲಾಖೆ ವಿರುದ್ಧವೇ ಹಕ್ಕು ಉಲ್ಲಂಘನೆಯ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ನಾಗರಿಕ ಸಮಾಜದಲ್ಲಿ ತಿಳಿದವರಿಂದಲೇ ಈ ಲೋಪ ಆಗುತ್ತಿವೆ. ಮೌಲ್ಯ, ಸಂಸ್ಕಾರ ನೀಡಿದ ಭಾರತದಲ್ಲಿಯೇ ಮಾನವ ಹಕ್ಕುಗಳ ರಕ್ಷಣೆಯ ಉಲ್ಲಂಘನೆ ಹೆಚ್ಚಾಗುತ್ತಿರುವುದು ವಿಪರ್ಯಾಸ ಎಂದರು.
    ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕಿ ನಜ್ಮಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಕಾನೂನು ಸಲಹೆಗಾರರಾದ ಹಾಲಪ್ಪ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts