More

    ಯಳಂದೂರು ಗ್ರಾಪಂಗಳಿಗೆ ಮೀಸಲಾತಿ ನಿಗದಿ

    ಯಳಂದೂರು: ತಾಲೂಕಿನ 12 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಎರಡನೇ ಅವಧಿಗೆ ಮಂಗಳವಾರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅಧ್ಯಕ್ಷತೆಯಲ್ಲಿ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಯಿತು.

    ಪಟ್ಟಣದ ಮಹದೇಶ್ವರ ಚಿತ್ರಮಂದಿರದಲ್ಲಿ ಆಯೋಜಿಸಿದ್ದ ಮೀಸಲು ನಿಗದಿ ಪ್ರಕ್ರಿಯೆಯಲ್ಲಿ ಮಾತನಾಡಿದ ಡಿ.ಎಸ್.ರಮೇಶ್, ಮೀಸಲು ಕಲ್ಪಿಸುವ ಸಂಬಂಧ ಗೊಂದಲಗಳಿಗೆ ಆಸ್ಪದ ನೀಡದಂತೆ ಸದಸ್ಯರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಕ್ರಿಯೆ ನಡೆಸಲಾಗುವುದು. ಕೆಲವು ಸಂದರ್ಭದಲ್ಲಿ ಆಯ್ಕೆ ಪ್ರಕ್ರಿಯೆ ಲಾಟರಿ ಮೂಲಕ ಮಾಡುವ ಸಾಧ್ಯತೆ ಇರುತ್ತದೆ. ಹಾಗೆಯೆ, ಪುನರಾವರ್ತನೆ ಆಗದಂತೆ ಮೀಸಲು ನಿಗದಿ ಮಾಡಲಾಗುತ್ತದೆ ಎಂದರು.

    ತಾಲೂಕಿನ ಒಟ್ಟು 12 ಗ್ರಾಪಂಗಳಲ್ಲಿ 4 ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಇದ್ದು, ಅದರಲ್ಲಿ 2 ಮಹಿಳೆಯರಿಗೆ. ಪರಿಶಿಷ್ಟ ಪಂಗಡಕ್ಕೆ 2, ಈ ಪೈಕಿ ಒಂದನ್ನು ಮಹಿಳೆಗೆ ಮೀಸಲಿರಿಸಲಾಗಿದೆ. ಅಂತೆಯೆ, ಸಾಮಾನ್ಯ 6ರಲ್ಲಿ 3 ಸಾಮಾನ್ಯ ಮಹಿಳೆಯರಿಗೆ ಮೀಸಲಾಗಿದೆ. ಉಪಾಧ್ಯಕ್ಷ ಸ್ಥಾನ 12ರ ಪೈಕಿ 4 ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಅದರಲ್ಲಿ 2 ಮಹಿಳೆಯರಿಗೆ. ಅಂತೆಯೆ, ಪರಿಶಿಷ್ಟ ಪಂಗಡಕ್ಕೆ 2 ಸ್ಥಾನ ಮೀಸಲಾಗಿದ್ದು, ಈ ಪೈಕಿ 1 ಸ್ಥಾನ ಮಹಿಳೆಗೆ ಮೀಸಲಾಗಿದೆ ಎಂದು ತಿಳಿಸಿದರು.

    ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ: ಮಾಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಹೊನ್ನೂರು ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಪರಿಶಿಷ್ಟ ಜಾತಿ. ಮದ್ದೂರು ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ (ಮಹಿಳೆ), ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ. ಯರಿಯೂರು ಪಂಚಾಯಿತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ( ಮಹಿಳೆ), ಉಪಾಧ್ಯಕ್ಷ ಸ್ಥಾನ ಸಾಮಾನ್ಯ.

    ಯರಗಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ (ಮಹಿಳೆ), ಉಪಾಧ್ಯಕ್ಷ ಸ್ಥಾನ ಸಾಮಾನ್ಯ. ಗುಂಬಳ್ಳಿ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ (ಮಹಿಳೆ), ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ. ದುಗ್ಗಹಟ್ಟಿ ಪಂಚಾಯಿತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ (ಮಹಿಳೆ), ಉಪಾಧ್ಯಕ್ಷ ಸ್ಥಾನ ಸಾಮಾನ್ಯ. ಕೆಸ್ತೂರು ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ (ಮಹಿಳೆ), ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ (ಮಹಿಳೆ). ಗೌಡಹಳ್ಳಿ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ (ಮಹಿಳೆ).

    ಅಂಬಳೆ ಪಂಚಾಯಿತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ( ಮಹಿಳೆ). ಅಗರ ಪಂಚಾಯಿತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ( ಮಹಿಳೆ). ಬಿಳಿಗಿರಿರಂಗನಬೆಟ್ಟ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ( ಮಹಿಳೆ)ಗೆ ನಿಗದಿಯಾಗಿದೆ.

    ಲಾಟರಿ ಮೂಲಕ ಮತ್ತೊಮ್ಮೆ ಆಯ್ಕೆ: ಮದ್ದೂರು ಹಾಗೂ ಕೆಸ್ತೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನ ಎಸ್ಟಿಗೆ ಮೀಸಲಾಗಿತ್ತು. ಈ ಪೈಕಿ ಮಹಿಳೆಗೆ ಯಾವ ಪಂಚಾಯಿತಿಯಲ್ಲಿ ಉಪಾಧ್ಯಕ್ಷ ಸ್ಥಾನ ನೀಡಬೇಕುಂಬುದರ ಕುರಿತು ಲಾಟರಿ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ವೇಳೆ ಕೆಸ್ತೂರು ಗ್ರಾಪಂ ಲಾಟರಿ ಮೂಲಕ ಆಯ್ಕೆಯಾಗಿದ್ದು, ಪರಿಶಿಷ್ಟ ಪಂಗಡದ ಮೀಸಲಿನಲ್ಲಿ ಏಕೈಕ ಸದಸ್ಯೆಯಾಗಿರುವ ಶೋಭಾ ಎಂಬುವರಿಗೆ ಮತ್ತೊಮ್ಮೆ ಅವಕಾಶ ದೊರೆಯಲಿದೆ.

    ಆಯ್ಕೆ ಪ್ರಕ್ರಿಯೆ ಕುರಿತು ಕೆಸ್ತೂರು ಗ್ರಾಮ ಪಂಚಾಯಿತಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಮತ್ತೊಮ್ಮೆ ಪರಿಶೀಲಿಸಬೇಕೆಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಅಪರ ಜಿಲ್ಲಾಧಿಕಾರಿ ಕಾತ್ಯಾಯಿನಿ ದೇವಿ, ತಹಸೀಲ್ದಾರ್ ಶಿವರಾಜ್, ಕಂದಾಯ, ಪೊಲೀಸ್ ಇಲಾಖೆ ಸಿಬ್ಬಂದಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts