More

    ಯಶಸ್ಸಿಗೆ ಬೇಕು ಸಂಸ್ಕಾರ-ಸಂಸ್ಕೃತಿ, ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿಕೆ

    ದಾವಣಗೆರೆ: ಯುವಕರು ಓದುವುದರ ಜತೆಗೆ ಕ್ರೀಡೆ, ಸಂಸ್ಕೃತಿ ಹಾಗೂ ಉತ್ತಮ ಸಂಸ್ಥಾರವನ್ನು ಬೆಳೆಸಿಕೊಂಡರೆ ಜೀವನದಲ್ಲಿ ಯಶಸ್ಸನ್ನು ಕಾಣಬಹುದು ಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಹೇಳಿದರು.

    ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಉದ್ಘಾಟಿಸಿ ಮಾತನಾಡಿ, ಕ್ರೀಡೆ, ದೈಹಿಕ ಹಾಗೂ ಮಾನಸಿಕ ವೃದ್ಧಿಗೆ ಸಹಕಾರಿಯಾಗಿದೆ: ಕ್ರೀಡಾಪಟುಗಳು ಸೋಲು-ಗೆಲುವಿನ ಬಗ್ಗೆ ಯೋಚಿಸದೆ ಉತ್ತಮ ಸಾಧನೆಯತ್ತ ಗಮನಹರಿಸಬೇಕು ಎಂದರು.

    ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ 61 ಪದಕಗಳನ್ನು ಪಡೆದು ಇತಿಹಾಸ ಸೃಷ್ಟಿಸಿದೆ. ದೇಶದ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಹಿರಿಮೆಯನ್ನು ಹೆಚ್ಚಿಸುತ್ತಿದ್ದಾರೆ. ನೀವು ಕೂಡ ದಸರಾ ಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು.

    ಶಾಸಕ ಪ್ರೊ.ಎನ್.ಲಿಂಗಣ್ಣ ಮಾತನಾಡಿ, ಕ್ರೀಡಾಪಟುಗಳು ಸೌಹಾರ್ದಯುತವಾಗಿ ಕ್ರೀಡಾ ಮನೋಭಾವದಿಂದ ಸರ್ಧಗಳಲ್ಲಿ ಭಾಗವಹಿಸಬೇಕು. ಎಂತಹ ಸವಾಲನ್ನು ಬೇಕಾದರೂ ಮನೋಧೈರ್ಯದಿಂದ ಎದುರಿಸಬಹುದು. ಆಟದಲ್ಲಿ ಸೋಲು, ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು.

    ಮೇಯರ್ ಆರ್. ಜಯಮ್ಮ ಗೋಪಿನಾಯ್ಕ, ಜಿಲ್ಲಾ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ಎಂ.ನೆಲವಿಗಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts