More

    ಯಾರ ಹತ್ತಿರ ಮಾಹಿತಿ ಕೇಳಬೇಕು?

    ಔರಾದ್: ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶಾಸಕ ಪ್ರಭು ಚವ್ಹಾಣ್ ಅಧ್ಯಕ್ಷತೆಯಲ್ಲಿ ಶನಿವಾರ ನಿಗದಿಯಾಗಿದ್ದ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಮುಂದೂಡಲಾಯಿತು.

    ನಿಗದಿತ ಸಮಯಕ್ಕೆ ಆಗಮಿಸಿದ ಶಾಸಕರು ಹಾಜರಿ ಪರಿಶೀಲಿಸಿದಾಗ ಪ್ರಮುಖ ಇಲಾಖೆ ಅಧಿಕಾರಿಗಳು ಗೈರಾಗಿದ್ದರು. ಅಲ್ಲದೆ ಕೆಲವರು ಪ್ರಗತಿ ವರದಿ ಸಲ್ಲಿಸಿರಲಿಲ್ಲ. ಇದರಿಂದ ಕೆಂಡಾಮAಡಲರಾಗಿ ಸಭೆ ಮುಂದೂಡಲು ನಿರ್ಧರಿಸಿದರು.

    ಸಭೆಗೆ ಸಾಕಷ್ಟು ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ಅನೇಕರು ಪ್ರಗತಿ ವರದಿಯನ್ನೂ ಸಲ್ಲಿಸಿಲ್ಲ. ಹೀಗಾದರೆ ಸಭೆ ಹೇಗೆ ನಡೆಸಬೇಕು? ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಕೆಲಸಗಳು ನಡೆಯುತ್ತಿವೆ. ಪ್ರಮುಖ ಇಲಾಖೆ ಅಧಿಕಾರಿಗಳೇ ಇಲ್ಲವೆಂದರೆ ಯಾರಿಗೆ ಮಾಹಿತಿ ಕೇಳಬೇಕು? ಬಿತ್ತನೆ ಪೂರ್ಣಗೊಂಡಿದ್ದು, ರೈತರು ನಾನಾ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ತಾಪಂ ಇಒ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹಿಂದಿನ ಅನೇಕ ಸಭೆಗಳಲ್ಲಿ ಗೈರು ಹಾಜರಾದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಕಾರಣ ಇಂತಹ ಸ್ಥಿತಿ ನಿರ್ಮಾಣವಾಗಿದೆ. ಮೊದಲು ನೀವು ಸುಧಾರಿಸಬೇಕು. ನಂತರ ಎಲ್ಲ ಅಧಿಕಾರಿಗಳು ತಾನಾಗಿಯೇ ಸುಧಾರಿಸುತ್ತಾರೆ. ಇಲ್ಲವಾದರೆ ನಿಮ್ಮ ವಿರುದ್ಧವೇ ಸೂಕ್ತ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒ ಜತೆ ಶಾಸಕರು ದೂರವಾಣಿಯಲ್ಲಿ ಮಾತನಾಡಿ ಕೆಡಿಪಿ ಸಭೆಗೆ ಗೈರು ಹಾಜರಾದ ಮತ್ತು ಪ್ರಗತಿ ವರದಿ ಸಲ್ಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts