More

    ಯುಗಚಿ ಜಲಾಶಯ ಭರ್ತಿ

    ಹಾಸನ : ಕಳೆದ ಮೂರು ದಿನಗಳಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ಬಾರಿ ಮಳೆಗೆ ಬೇಲೂರು ಪಟ್ಟಣ ಸಮೀಪದ ಯಗಚಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಭಾನುವಾರ ಐದು ಕ್ರಸ್ಟ್ ಗೇಟ್‌ಗಳ ಮೂಲಕ ನೀರನ್ನು ಹೊರ ಬಿಡಲಾಗಿದೆ.

    ಕಳೆದ ಮೂರ‌್ನಾಲ್ಕು ದಿನಗಳಿಂದ ತಾಲೂಕು ಸೇರಿದಂತೆ ಮಲೆನಾಡು ಹಾಗೂ ಯಗಚಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ನೀರೆಲ್ಲ ನದಿ ಮೂಲಕ ಜಲಾಶಯಕ್ಕೆ ಹರಿದು ಬರುತ್ತಿರುವುದರಿಂದ ಬೇಲೂರು ಪಟ್ಟಣ ಸಮೀಪದ ಯಗಚಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕೆಲ ದಿನಗಳಿಂದ ಜಲಾಶಯದ ಐದು ಕ್ರಸ್ಟ್ ಗೇಟ್‌ಗಳ ಮೂಲಕ ಸ್ವಲ್ಪ ನೀರನ್ನು ಹೊರ ಬಿಡಲಾಗುತ್ತಿತ್ತು. ಆದರೆ, ಕಳೆದ ಮೂರು ದಿನಗಳಿಂದ ಬಿಟ್ಟೂ ಬಿಟ್ಟು ಬರುತ್ತಿರುವ ಬಾರಿ ಮಳೆಯ ಕಾರಣದಿಂದ ಜಲಾಶಯಕ್ಕೆ ಹೆಚ್ಚುವರಿಯಾಗಿ 2500 ಸಾವಿರ ಕ್ಯೂಸೆಕ್ ನೀರು ಹರಿದು ಬರುತಿದೆ. ಜಲಾಶಯ ಪುನ: ಸಂಪೂರ್ಣವಾಗಿ ಭತಿಯಾಗಿರುವ ಹಿನ್ನೆಲೆಯಲ್ಲಿ ಹರಿದು ಬರುತ್ತಿರುವ ನೀರಿನಲ್ಲಿ 2 ಸಾವಿರ ಕ್ಯೂಸೆಕ್ ನೀರನ್ನು ನೇರವಾಗಿ ನದಿ ಹಾಗೂ ಎಡದಂಡೆ ನಾಲೆ ಮೂಲಕ ಹೊರ ಬಿಡಲಾಗುತ್ತಿದೆ.


    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts