More

    ಯುಜಿಡಿಗೆ 168.27 ಕೋಟಿ ರೂ.

    ಹುಕ್ಕೇರಿ, ಬೆಳಗಾವಿ: ತಾಲೂಕಿನ ಸಂಕೇಶ್ವರ ಹಾಗೂ ಹುಕ್ಕೇರಿ ಪಟ್ಟಣಗಳ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಯು.ಜಿ.ಡಿ(ಒಳಚರಂಡಿ) ನಿರ್ಮಾಣಕ್ಕೆ 168.27 ಕೋಟಿ ರೂ. ಹಣ ಬಿಡುಗಡೆಯಾಗಿದ್ದು, ಕಾಮಗಾರಿಗೆ ಎರಡು ಪಟ್ಟಣಗಳ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.
    ಇಲ್ಲಿನ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ಕ್ಷೇತ್ರದ ಸಾರ್ವಜನಿಕರ ಕುಂದುಕೊರತೆ ಆಲಿಸಿ ಅವರು ಮಾತನಾಡಿದರು.

    ಪಟ್ಟಣಗಳು ಬೆಳೆದಂತೆ ಕೊಳಚೆ ನೀರು ಅತಿ ದೊಡ್ಡ ಸಮಸ್ಯೆಯಾಗುತ್ತಿದೆ. ಸೆಫ್ಟಿಕ್ ಟ್ಯಾಂಕ್ ಮಾಡಿದ್ದರೂ ನೀರು ಇಂಗುತ್ತಿಲ್ಲ. ಈ ಸಮಸ್ಯೆ ಪರಿಹರಿಸಲು ಸಹೋದರ ಉಮೇಶ ಕತ್ತಿ ಯು.ಜಿ.ಡಿ. ನಿರ್ಮಾಣಕ್ಕಾಗಿ ಸಲ್ಲಿಸಿದ ಪ್ರಸ್ತಾವಕ್ಕೆ ಹುಕ್ಕೇರಿ ಪಟ್ಟಣಕ್ಕೆ 69 ಕೋಟಿ ರೂ. ಹಾಗೂ ಸಂಕೇಶ್ವರ ಪಟ್ಟಣಕ್ಕೆ 99.27 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದರು.

    ತಾಲೂಕಿನಲ್ಲಿ ಸರ್ಕಾರಿ ಶಾಲೆಗಳು ಉಳಿದು, ಬೆಳೆಯಬೇಕಾದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಅವಶ್ಯವಾಗಿದೆ. ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ 584 ಶಿಕ್ಷಕರ ಕೊರತೆಯಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮುತುವರ್ಜಿ ವಹಿಸಿ ಶಿಕ್ಷಕರ ಕೊರತೆ ಸರಿಪಡಿಸಬೇಕು. ಕೆಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24 ದಾದಿಯರ ಕೊರತೆಯನ್ನು ಬಗೆಹರಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಮಾಜಿ ಸಚಿವ ಉಮೇಶ ಕತ್ತಿ ಅವರು ಸಂಪೂರ್ಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಮಂಜೂರಾತಿ ಪಡೆದ 626 ಕೋಟಿ ರೂ. ವೆಚ್ಚದ ಕಾಮಗಾರಿಗಳಲ್ಲಿ ಎಲ್ಲವೂ ಸಂಪೂರ್ಣ ಪೂರ್ಣಗೊಂಡಿವೆ. ಕೆಲವು ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೂಮಿಪೂಜೆ ನೆರವೇರಿಸಲು ದಿನಾಂಕ ನಿಗದಿಪಡಿಸಲಾಗುತ್ತದೆ ಎಂದರು.
    ಪುರಸಭೆ ಅಧ್ಯಕ್ಷ ಎ.ಕೆ.ಪಾಟೀಲ, ಉಪಾಧ್ಯಕ್ಷ ಆನಂದ ಗಂಧ, ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಸತ್ಯಪ್ಪ ನಾಯಿಕ, ಬಿಜೆಪಿ ಮಂಡಲ ಅಧ್ಯಕ್ಷ ರಾಚಯ್ಯ ಹಿರೇಮಠ, ಮುಖಂಡರಾದ ನಂದು ಮುಡಸಿ, ಗುರು ಕುಲಕರ್ಣಿ, ಬಸವರಾಜ ಮರಡಿ, ತಹಸೀಲ್ದಾರ್ ಡಾ. ಡಿ.ಎಚ್.ಹೂಗಾರ, ತಾಲೂಕು ಪಂಚಾಯಿತಿ ಇಒ ಉಮೇಶ ಸಿದ್ನಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ, ತಾಲೂಕು ಆರೋಗ್ಯ ಅಧಿಕಾರಿ ಡಾ. ಉದಯ ಕುಡಚಿ, ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತ ಪ್ರಭಾಕರ ಕಾಮತ, ಕೃಷಿ ಅಧಿಕಾರಿ ಎಂ.ಎಸ್. ಪಟಗುಂದಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts