More

    ಯುದ್ಧೋಪಾದಿಯಲ್ಲಿ ಕೆಲಸ ಮಾಡಿ; ಒಗ್ಗಟ್ಟಾಗಿ ಪಕ್ಷ ಕಟ್ಟಿ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ

    ಶಿಕಾರಿಪುರ: ಇದು ಚುನಾವಣಾ ಸಮಯ, ನಾವು ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕು. ಪ್ರತಿ ಬೂತ್‌ಗಳು ಗಟ್ಟಿಯಾಗಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
    ಸೋಮವಾರ ಸಾಂಸ್ಕೃತಿಕ ಭವನದಲ್ಲಿ ಏರ್ಪಡಿಸಿದ್ದ ಶಿಕಾರಿಪುರ ಹಾಗೂ ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೂರ ಇರುವವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಾಗಿ ಪಕ್ಷ ಕಟ್ಟಬೇಕು. ಪ್ರತಿ ಕಾರ್ಯಕರ್ತನೂ ಪಕ್ಷದ ಆಸ್ತಿ. ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು. ಸಾಂಘಿಕ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಲಿದ್ದು, ಜನರ ಬಳಿ ಹೋಗಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಯೋಜನೆಗಳನ್ನು ಮನನ ಮಾಡಿಸಿ ಎಂದು ಸಲಹೆ ನೀಡಿದರು.
    ರಾಷ್ಟ್ರದಲ್ಲಿ ಪ್ರಜಾತಂತ್ರ ವ್ಯವಸ್ಥೆ ಬರಬೇಕಾದರೆ ಜನಸಾಮಾನ್ಯರ ಬದುಕು ಹಸನಾಗಬೇಕಾದರೆ, ಸಂವಿಧಾನದ ಆಶಯಗಳು ಉಳಿಯಬೇಕಾದರೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ಗೆಲ್ಲಬೇಕಾದರೆ ನೂತನ ಸಾರಥಿಗಳು ಇನ್ನಷ್ಟು ಬಲಿಷ್ಠ ಗೊಳಿಸಬೇಕು. ಕಾರ್ಯಕರ್ತರು ಸೈನಿಕರ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.
    ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್ ಮಾತನಾಡಿ, ಕಾಂಗ್ರೆಸ್ ಕಾರ್ಯಕರ್ತರ ಪಡೆ ಹೆಚ್ಚಾಗಿವೆ. ಹಳ್ಳಿ ಹಳ್ಳಿಗಳಲ್ಲಿ ಮತದಾರರು ಕಾಂಗ್ರೆಸ್ ಬೆಂಬಲಿಸುವ ಮಾತನ್ನಾಡುತ್ತಿರುವುದು ನಮಗೆ ಸಂತಸ ತಂದಿದೆ. ಹೊಸ ಅಧ್ಯಕ್ಷರಿಗೆ ಈಗ ಸವಾಲಿನ ಸಮಯ. ನೀವಿಬ್ಬರೂ ಸಮರ್ಥ ವಾಗಿ ನಿಭಾಯಿಸಿ ಪಕ್ಷವನ್ನು ಗೆಲ್ಲಿಸಿಕೊಂಡು ಬರುತ್ತೀರಿ ಎಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts