More

    ಯುವಕರಿಗೆ ಉದ್ಯೋಗ ನೀಡಲು ಒತ್ತಾಯ

    ಮುಂಡರಗಿ: ಕೇಂದ್ರ ಸರ್ಕಾರ ದೇಶದ ಆರ್ಥಿಕ ಸಮಸ್ಯೆ ನಿವಾರಣೆ ಮಾಡುವುದರ ಜೊತೆಗೆ ಉದ್ಯೋಗ ಸೃಷ್ಟಿಸಬೇಕು. ಇಲ್ಲವಾದರೆ ಸಂಸದರ ಕಚೇರಿ ಮುಂದೆ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಗದಗ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಅಶೋಕ ಮಂದಾಲಿ ತಿಳಿಸಿದರು.

    ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೋಟು ಅಮಾನ್ಯೀಕರಣ, ಜಿಎಸ್​ಟಿಯಿಂದ ದೇಶ ಆರ್ಥಿಕ ಸಮಸ್ಯೆ ಎದುರಿಸಬೇಕಾಗಿದೆ. ಲಾಕ್​ಡೌನ್​ಗಿಂತ ಮೊದಲೇ ಆರ್ಥಿಕ ಪರಿಸ್ಥಿತಿ ಕುಸಿತಗೊಂಡಿತ್ತು. ಮಧ್ಯಮ ವರ್ಗದವರು ಬಡತನವನ್ನು ಅನುಭವಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನಿರ್ಧಾರಗಳು ಯುವಕರನ್ನು ನಿರುದ್ಯೋಗದ ಕಡೆಗೆ ತಳ್ಳಿವೆ ಎಂದರು.

    ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ಪ್ರತಿ ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಭರವಸೆ ಈಡೇರಿಸಲಿಲ್ಲ. ಕಳೆದ ಆರು ವರ್ಷದಲ್ಲಿ 12ಕೋಟಿ ಜನರ ಉದ್ಯೋಗ ಕಸಿದುಕೊಂಡಿದ್ದಾರೆ ಎಂದು ಆರೋಪಿಸಿದರು.

    ಶಿರಹಟ್ಟಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ವಿರೂಪಾಕ್ಷ ನಂದೆಣ್ಣವರ ಮಾತನಾಡಿ, ಯುವ ಮುಖಂಡ ಲೋಕೇಶ ದೊಡ್ಡಮನಿ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಸಮಿತಿ ತಾಲೂಕು ಅಧ್ಯಕ್ಷ ಮಂಜುನಾಥ ಡಂಬಳ, ಶಂಭು ಕಾಳೆ, ವೀರೇಶ ಬೆಟಗೇರಿ, ಯಲ್ಲಪ್ಪ ಹುಲಗೇರಿ, ರಾಮು ಭಜಂತ್ರಿ, ಸುರೇಶ ಉಪ್ಪಾರ, ಕಿರಣ ಲಮಾಣಿ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts