More

    ಯುವಕರಿಗೆ ಮಾದಕ ವಸ್ತುಗಳ ಬಗೆಗೆ ಜಾಗೃತಿ ಅಗತ್ಯ

    ಗೋಣಿಕೊಪ್ಪ: ಯುವ ಜನತೆ ಮಾದಕ ವಸ್ತುಗಳಿಂದ ದೂರ ಉಳಿಯಲು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಸಲಹೆ ನೀಡಿದರು.

    ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ಇಂಡಿಯನ್ ಯುವಕ ಸಂಘ ಮತ್ತು ಪೊನ್ನಂಪೇಟೆ ನಿಸರ್ಗ ಯುವತಿ ಮಂಡಳಿ ಸಹಯೋಗದಲ್ಲಿ ಶನಿವಾರ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

    ದೇಶದಲ್ಲಿ ಯುವ ಸಮೂಹ ಹೆಚ್ಚಿರುವುದರಿಂದ ನಿರೀಕ್ಷೆ ಹೆಚ್ಚಿವೆ. ಪ್ರತಿಭೆಗೆ ಅವಕಾಶ ಮಾಡಿಕೊಡಲು ಸರ್ಕಾರ ಇಲಾಖೆಗಳ ಮೂಲಕ ಯೋಜನೆ ಅನುಷ್ಠಾನಗೊಳಿಸುತ್ತಿದೆ. ಇದರ ಸದ್ಬಳಕೆ ಮಾಡಿಕೊಳ್ಳಲು ಯುವ ಜನತೆ ಮುಂದಾಗಬೇಕಿದೆ. ಮಾದಕ ವಸ್ತುಗಳ ಬಳಕೆ ಬಗ್ಗೆ ಹೆಚ್ಚು ಜಾಗೃತರಾಗಬೇಕಿದೆ. ಯುವ ಸಮೂಹದಿಂದ ಅಭಿವೃದ್ಧಿಯ ನಿರೀಕ್ಷೆ ಹೆಚ್ಚಿದ್ದು, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವುದರಿಂದ ಅಭಿವೃದ್ಧಿ ಕಾರ್ಯಗಳತ್ತ ಸೆಳೆಯುವ ಪ್ರಯತ್ನ ಹೆಚ್ಚಾಗಬೇಕು ಎಂದರು.

    ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕ ಜಿ.ಎಸ್.ಗುರುಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿರುವ ಯುವಕ ಸಂಘಗಳನ್ನು ಚಟುವಟಿಕೆಯತ್ತ ಸೆಳೆಯಲು ವಿಶೇಷ ಕಾರ್ಯಕ್ರಮ ರೂಪಿಸಬೇಕಿದೆ. ಸರ್ಕಾರ ಕ್ರಿಯಾ ಯೋಜನೆಗಳ ಅನುಷ್ಠಾನಕ್ಕೆ ಯೋಜನೆ ರೂಪಿಸಿಕೊಂಡಿದೆ ಎಂದರು.

    ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೋಮೇಂಗಡ ಗಣೇಶ್ ತಿಮ್ಮಯ್ಯ, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಸುರೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಚಕ್ರವರ್ತಿ, ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕ ಜಿ.ಎಸ್.ಗುರುಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
    ವಿವಿಧ ಕಲಾ ಪ್ರಕಾರಗಳ ಸ್ಪರ್ಧೆ: ಜನಪದ ನೃತ್ಯ, ಜನಪದ ಗೀತೆ, ನಾಟಕ, ಶಾಸ್ತ್ರೀಯ ಗಾಯನ, ಸಿತಾರ್, ಕೊಳಲು, ತಬಲ, ವೀಣೆ, ಮೃದಂಗ, ಭರತನಾಟ್ಯ, ಒಡಿಸ್ಸಿ, ಮಣಿಪುರಿ, ಕೊಚುಪುಡಿ, ಕಥಕ್, ಹಾರ್ಮೋನಿಯಂ, ಗಿಟಾರ್, ಆಶುಭಾಷಣ ಸ್ಪರ್ಧೆ ನಡೆಯಿತು. ಪೊನ್ನಂಪೇಟೆ ಗ್ರಾಪಂ ಅಧ್ಯಕ್ಷೆ ಗಿರಿಜಾ ವೆಂಕಟೇಶ್, ಸದಸ್ಯ ರಾಮಕೃಷ್ಣ, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್, ವಿರಾಜಪೇಟೆ ಮಾಜಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ವಿರಾಜಪೇಟೆ ತಾಲೂಕು ಯುವ ಒಕ್ಕೂಟ ಅಧ್ಯಕ್ಷೆ ಶೀಲಾ ಬೋಪಣ್ಣ, ಪೊನ್ನಂಪೇಟೆ ನಿಸರ್ಗ ಯುವತಿ ಮಂಡಳಿ ಅಧ್ಯಕ್ಷೆ ರೇಖಾ ಶ್ರೀಧರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶರೀನ್ ಕೊಡವ, ಉಪ ಪ್ರಾಂಶುಪಾಲ ಎಂ.ಯು.ಚಂಗಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts