More

    ಯುವಕರು ಸ್ವಯಂಪ್ರೇರಿತವಾಗಿ ಬಿಜೆಪಿ ಸೇರ್ಪಡೆ

    ಗುಂಡ್ಲುಪೇಟೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕಾರ್ಯಕ್ರಮಗಳು ಹೆಚ್ಚು ಜನರನ್ನು ತಲುಪಿದ್ದರಿಂದ ಯುವಕರು ಸ್ವಯಂಪ್ರೇರಿತರಾಗಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ತಿಳಿಸಿದರು.

    ಶನಿವಾರ ತಾಲೂಕಿನ ಕೂತನೂರು ಹಾಗೂ ಭೀಮನಬೀಡು ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದರು. ಕಳೆದ ಎಂಟು ವರ್ಷಗಳಿಂದ ನರೇಂದ್ರ ಮೋದಿ ದೇಶದ ಅಭಿವೃದ್ಧಿಗಾಗಿ ಮಾಡುತ್ತಿರುವ ಕಾರ್ಯಗಳು ಜನರ ಮೆಚ್ಚುಗೆಗೆ ಪಾತ್ರವಾಗುತ್ತಿವೆ. ಆದ್ದರಿಂದಲೇ ದೇಶದ ಉದ್ದಗಲಕ್ಕೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತಿದೆ. ನಾನು ಶಾಸಕನಾಗಿ ಆಯ್ಕೆಯಾದ ನಂತರ 800 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಹಿಂದುಳಿದ ವರ್ಗಗಳ ಜನರ ಬಡಾವಣೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಎಲ್ಲ ವರ್ಗಗಳ ಜನರಿಗೂ ಬೇಡಿಕೆಗನುಸಾರ ಸಮುದಾಯ ಭವನಗಳು, ಸಿಸಿ ರಸ್ತೆ, ಚರಂಡಿ, ಕುಡಿಯುವ ನೀರು ಮುಂತಾದ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಪ್ರತಿ ವರ್ಷವೂ ಮಳೆಯ ಕೊರತೆಯಿಂದ ಬರಪೀಡಿತವಾಗುತ್ತಿದ್ದ ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಲ್ಲಿ ನದಿ ನೀರು ತುಂಬಿಸಿದ್ದು ಹಾಗೂ ಈ ಬಾರಿ ಉತ್ತಮ ಮಳೆ ಬಿದ್ದಿದ್ದರಿಂದ ತಾಲೂಕಿನ ಕೆರೆಕಟ್ಟೆಗಳು ತುಂಬಿ ರೈತಾಪಿ ಜನರಿಗೆ ಅನುಕೂಲವಾಗಿದೆ. ಆದ್ದರಿಂದಲೇ ತಾಲೂಕಿನಲ್ಲಿಯೂ ವಿವಿಧ ಪಕ್ಷಗಳ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದರು.

    ಭೀಮನಬೀಡು ಗ್ರಾಮದಲ್ಲಿ ಸುಮಾರು 30ಕ್ಕೂ ಹೆಚ್ಚಿನ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾದರು. ಮತಯಾಚನೆಯಲ್ಲಿ ಬರಗಿ ಶಕ್ತಿ ಕೇಂದ್ರದ ಅಧ್ಯಕ್ಷ ಮಂಚಹಳ್ಳಿ ಬಾಬು, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಣಯ್, ಮುಖಂಡರಾದ ಎಲ್.ಸುರೇಶ್, ಅರಸಶೆಟ್ಟಿ, ದೋಣಿಶೆಟ್ಟಿ, ಮಹದೇವಶೆಟ್ಟಿ, ಹಂಗಳ ನಂದೀಶ್, ಮಾಧ್ಯಮ ಸಂಚಾಲಕ ಎಸ್.ಸಿ.ಮಂಜುನಾಥ್ ಸೇರಿದಂತೆ ಹಲವರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts