More

    ಯುವಜನರು ದೇಶದ ಅಮೂಲ್ಯ ಆಸ್ತಿ

    ಬೆಳಗಾವಿ: ಯುವಜನರು ನಮ್ಮ ದೇಶದ ಅಮೂಲ್ಯ ಆಸ್ತಿ. ಯುವಕರು ಕಲೆ, ಸಂಸ್ಕೃತಿ ಕ್ರೀಡೆಗಳಲ್ಲಿ ಭಾಗವಹಿಸುವ ಮನೋಪ್ರವೃತ್ತಿ ಬೆಳಸಿಕೊಳ್ಳಬೇಕು ಎಂದು ಸಂಸದೆ ಮಂಗಲ ಅಂಗಡಿ ಹೇಳಿದರು.

    ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಮಂಗಳವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಜ್ಯ ಯುವ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಯುವ ಉತ್ಸವ-ಇಂಡಿಯಾ-2047 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಯುವಜನರ ಆರೋಗ್ಯದ ಜತೆಗೆ ದೈಹಿಕ ಮತ್ತು ಬೌದ್ಧಿಕ ಶಕ್ತಿ ವೃದ್ಧಿಗೆ ಯುವ ಉತ್ಸವ ಉತ್ತಮ ವೇದಿಕೆಯಾಗಿದೆ. ಇಂತಹ ಯುವ ಉತ್ಸವಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು. ಮಕ್ಕಳ ಮೇಲೆ ಯಾವುದೇ ಒತ್ತಡ ಹಾಕದೆ ಅವರ ಆಸೆ, ಗುರಿಗೆ ಪ್ರೋತ್ಸಾಹ ನೀಡುವ ಮೂಲಕ ಅವರನ್ನು ದೇಶ ಕಟ್ಟುವ ನಾಯಕರನ್ನಾಗಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

    ಪದ್ಮಶ್ರೀ ಪುರಸ್ಕೃತ ಹಾಗೂ ಮಾಸ್ ಸಂಸ್ಥೆಯ ಸಿಇಒ ಸೀತವ್ವ ಜೋಡಟ್ಟಿ ಮಾತನಾಡಿ, ಯುವಜನರಲ್ಲಿ ಹುಮ್ಮಸ್ಸು ತುಂಬುವ ಮೂಲಕ ಅವರಲ್ಲಿ ಅಡಗಿರುವ ಕಲೆಯನ್ನು ಹೊರತರುವ ಕೆಲಸವನ್ನು ಯುವ ವೇದಿಕೆಯಿಂದ ಮಾಡಲಾಗುತ್ತಿದೆ ಎಂದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮಾತನಾಡಿ, ಆಕರ್ಷಣೀಯ ಜಗತ್ತಿಗೆ ಯುವ ಜನತೆ ಮಾರು ಹೋಗಬಾರದು. ಸ್ವಾಮಿ ವಿವೇಕಾನಂದ ನುಡಿಯನ್ನು ನೆನಯುತ್ತ ಈ ಜಗತ್ತಿನಲ್ಲಿ ಏನಾದರೂ ಬದಲಾವಣೆ ಯಾಗಬೇಕಾದರೆ ಬಿಸಿ ರಕ್ತ ಹೊಂದಿರುವ ಯುವ ಜನತೆಯಿಂದ ಮಾತ್ರ ಸಾಧ್ಯ ಎಂಬುದನ್ನು ಅರಿತುಕೊಂಡು ಮುನ್ನಡೆಯಬೇಕು ಎಂದರು. ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತ ಮಲ್ಲೇಶ ಚೌಗಲೆ, ರಾಜ್ಯ ಯುವ ಪ್ರಶಸ್ತಿ ವಿಜೇತ ಸಿದ್ದಣ್ಣ ದುರದುಂಡಿ, ಚಿಕ್ಕೋಡಿ ತಾಲೂಕು ಅಧ್ಯಕ್ಷ ರಾಘವೇಂದ್ರ ಲಂಬುಗೋಳ, ಜಿಲ್ಲಾ ಯುವ ಒಕ್ಕೂಟದ ಗೌರವ ಅಧ್ಯಕ್ಷ ರಾಮಚಂದ್ರ ಕಾಂಬಳೆ, ಎನ್‌ವೈಕೆಯ ಜಿಲ್ಲಾ ಯುವಜನ ಅಧಿಕಾರಿ ರೋಹಿತ ಕಲ್ರಾ, ಎಸ್.ಯು. ಜಮಾದಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಬಸವರಾಜ ಜಕ್ಕನ್ನವರ, ಸಿರಿಗನ್ನಡ ಪ್ರತಿಷ್ಠಾನ ಅಧ್ಯಕ್ಷೆ ರಜನಿ ಜಿರಿಗಿಹಾಳ, ರಾಷ್ಟ್ರೀಯ ಕುಸ್ತಿ ಪಟು ಅತುಲ್ ಸುರೇಶ ಶಿರೋಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts