More

    ಯುವಜನಾಂಗಕ್ಕೆ ರಾಯಣ್ಣ ಪ್ರೇರಕ ಶಕ್ತಿ

    ಅಥಣಿ: ಸಂಗೊಳ್ಳಿ ರಾಯಣ್ಣ ಇಂದಿನ ಯುವಜನಾಂಗಕ್ಕೆ ಸ್ಫೂರ್ತಿ ಹಾಗೂ ಪ್ರೇರಣಾ ಶಕ್ತಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣನ ನೂತನ ಮೂರ್ತಿಯನ್ನು ಸೋಮವಾರ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ರಾಯಣ್ಣನ ದೇಶಪ್ರೇಮ, ಆದರ್ಶಗಳನ್ನು ಯುವಕರು ಅಳವಡಿಸಿಕೊಳ್ಳಬೇಕು. ಅಂತಹ ಮಹಾನ್ ವ್ಯಕ್ತಿಯ ಕಂಚಿನ ಮೂರ್ತಿ ಮಾಡಿಸಿರುವ ಬುಟಾಳಿ ಅವರ ಸೇವೆ ಸ್ಮರಣೀಯ ಎಂದರು.

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ನಂದಗಡದ 7 ಎಕರೆ ಪ್ರದೇಶದಲ್ಲಿ ಸೈನಿಕ ಶಾಲೆ ನಿರ್ಮಿಸಲು 270 ಕೋಟಿ ರೂ. ಮಂಜೂರಾತಿ ನೀಡಲಾಗಿತ್ತು. ಸೈನಿಕ ಶಾಲೆಗಳ ಮಾದರಿಯಲ್ಲಿ ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ವಸತಿ ಶಾಲೆ ನಿರ್ಮಿಸಲು ಎಲ್ಲ ರೀತಿಯ ನೆರವು ನೀಡಲಾಗಿತ್ತು ಎಂದರು.

    ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಸಮಗ್ರ ನೀರಾವರಿ ಯೋಜನೆ ಪೂರ್ಣಗೊಳಿಸುವ ಜತೆಗೆ ಅಥಣಿ ಮತ್ತು ಕಾಗವಾಡ ತಾಲೂಕಿನ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುತ್ತೇವೆ. ನುಡಿದಂತೆ ನಡೆಯುವ ಸರ್ಕಾರ ನಮ್ಮದು ಎಂದರು.

    ಅಥಣಿ ತಾಲೂಕಿನ ನೀರಾವರಿ, ವಿದ್ಯುತ್ ಸಮಸ್ಯೆ, ಕಬ್ಬು ಮತ್ತು ದ್ರಾಕ್ಷಿ ಬೆಳೆಗಾರರ ಸಮಸ್ಯೆ ಮತ್ತು ನೆರೆ ಸಂತ್ರಸ್ತರಿಗೆ ಪರಿಹಾರ ಮತ್ತು ಪುನರವಸತಿ ಕುರಿತು ಚರ್ಚಿಸುವೆ ಎಂದರು. ಕೌಲಗುಡ್ಡದ ಅಮರೇಶ್ವರ ಮಹಾರಾಜರು, ಶಾಸಕರಾದ ಸತೀಶ ಜಾರಕಿಹೊಳಿ, ಮುಖಂಡರಾದ ಎಂ.ಬಿ.ಪಾಟೀಲ, ಎಸ್.ಕೆ.ಬುಟಾಳಿ, ಲಕ್ಷ್ಮಣರಾವ ಚಿಂಗಳೆ, ಗಜಾನನ ಮಂಗಸೂಳಿ, ಬಸವರಾಜ ಬುಟಾಳಿ, ಸತ್ಯಪ್ಪ ಬಾಗೆನ್ನವರ, ಸಿದ್ದಾರ್ಥ ಸಿಂಗೆ, ಶ್ರೀಕಾಂತ ಪೂಜಾರಿ, ಶಿವು ಗುಡ್ಡಾಪುರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts