More

    ಯುವನಿಧಿ ನೋಂದಣಿಯ ಗುರಿ ಸಾಧಿಸಿ


    ಯಾದಗಿರಿ: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿನ ಯುವನಿಧಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಎಲ್ಲ ರೀತಿಯ ಸಿದ್ಧತೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಸೂಚಿಸಿದ್ದಾರೆ.

    ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಯೋಜನೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿ ಗುರಿ ಸಾಧಿಸಿ, ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಜಿಲ್ಲೆಯಲ್ಲಿ 2022-23ರಲ್ಲಿ ಪದವಿ,ಡಿಪ್ಲೊಮಾ ಪಡೆದ ವಿದ್ಯಾರ್ಥಿಗಳು (ಅಂದರೆ 2023ನೇ ವರ್ಷದಲ್ಲಿ ಉತ್ತೀರ್ಣರಾದವರು) ಯುವ ನಿಧಿ ಯೋಜನೆಯಲ್ಲಿ ನೊಂದಾಯಿಸಿಕೊಳ್ಳಲು ಅರ್ಹರಿದ್ದಾರೆ ಎಂದರು.

    ಪದವೀಧರರಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೊಮಾ ತೇರ್ಗಡೆಯಾದವರಿಗೆ 1500 ರೂ ಗಳ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ವರೆಗೆ ನೀಡಲಾಗುತ್ತದೆ. ಈ ಯೋಜನೆಯ ಕುರಿತಂತೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ತಾಲೂಕುಗಳು ಹಾಗೂ ಗ್ರಾಪಂ ಮಟ್ಟದಲ್ಲಿ ಹೆಚ್ಚಿನ ಅರಿವು ಮೂಡಿಸುವುದರ ಜತೆಗೆ ಜಿಲ್ಲೆಯ ಗರಿಷ್ಠ ಸಂಖ್ಯೆಯ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯವನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಲು ಸೂಚಿಸಿದರು.

    ಜಿಲ್ಲೆಯ ಎಲ್ಲ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಸಂಸ್ಥೆಯಲ್ಲಿ 2022-23 ರಲ್ಲಿ ಪದವಿ,ಡಿಪ್ಲೊಮಾ ಪಡೆದ ವಿದ್ಯಾರ್ಥಿಗಳಿಗೆ ಯೋಜನೆಯ ಬಗ್ಗೆ ಮಾಹಿತಿ ನೀಡಬೇಕು. ವಿದ್ಯಾರ್ಥಿಗಳ ಮಾಹಿತಿಯನ್ನು ಸಂಬಂಧಪಟ್ಟ ಆಧಿಕಾರಿಗಳಿಗೆ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಅರ್ಹ ಪದವೀಧರರು ಸಕರ್ಾರದ ಯೋಜನೆಯ ನೆರವು ಪಡೆಯುವಂತೆ ಸಲಹೆ ನೀಡಿದರು.

    ಅಂದು ರಾಜ್ಯದಲ್ಲಿ ನೋಂದಣಿ ಮಾಡಿರುವ ಎಲ್ಲ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ಜಿಲ್ಲೆಯಲ್ಲಿ ಇದುವರೆಗೆ 752 ಮಂದಿ ಮಾತ್ರ ಯೋಜನೆಗೆ ನೊಂದಣಿ ಮಾಡಿದ್ದು, ಜಿಲ್ಲೆಯ ಅರ್ಹ ಎಲ್ಲ ಫಲಾನುಭವಿಗಳಿಗೂ ಈ ಯೋಜನೆಯ ಪ್ರಯೋಜನ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕಿದೆ. ಅಭ್ಯರ್ಥಿಗಳು ಸೇವಾ ಸಿಂಧು ಮೂಲಕ ಅಜರ್ಿ ಸಲ್ಲಿಸಬಹುದಾಗಿದೆ. ರಾಜ್ಯದಲ್ಲಿ ಪದವಿ,ಡಿಪ್ರೋಮಾ ಪಡೆದವರು, ಕನಿಷ್ಠ 6 ವರ್ಷ ರಾಜ್ಯದ ನಿವಾಸಿಗಳಾಗಿರುವವರು ಮಾತ್ರ ಅರ್ಹರಿದ್ದು, ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ, ಡಿಪ್ಲೊಮಾ ಉತ್ತೀರ್ಣದ ಪ್ರಮಾಣಪತ್ರಗಳನ್ನು ಸಲ್ಲಿಸಬೇಕಾಕು. ಯೋಜನೆಯ ನೋಂದಣಿಗೆ ಯಾವುದೇ ಶುಲ್ಕವಿರುವುದಿಲ್ಲ ಎಂದ ವಿವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts