More

    ಯೋಜನೆಗಳ ಬಗ್ಗೆ ಮಾಹಿತಿ ನೀಡಿ

    ಯಾದಗಿರಿ: ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದುಕೊಳ್ಳುವ ಫಲಾನುಭವಿಗಳು ಜೀವನದಲ್ಲಿ ಆರ್ಥಿಕವಾಗಿ ಸಬಲರಾಗಲು ಪ್ರಯತ್ನಿಸುವಂತೆ ಶಾಸಕ ವೆಂಕಟರಡ್ಡಿ ಮುದ್ನಾಳ್ ಸಲಹೆ ನೀಡಿದರು.

    ಮಂಗಳವಾರ ತಮ್ಮ ಜನಸಂಪರ್ಕ ಕಚೇರಿಯಲ್ಲಿ ಮರ್ಹ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದಿಂದ 2019-20 ಮತ್ತು 2020-21ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ ಯಾದಗಿರಿ ಮತಕ್ಷೇತ್ರದ 21 ಜನ ಫಲಾನುಭವಿಗಳಿಗೆ ಕೊಳವೆ ಭಾವಿಯ ಪಂಪ್, ಮೋಟಾರ್ ಹಾಗೂ ಇತರ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿ, ತಾವಷ್ಟೆ ಸೌಲಭ್ಯ ಪಡೆದುಕೊಂಡರೆ ಸಾಲದು. ಬದಲಾಗಿ ಇಂಥ ಜನಪರ ಯೋಜನೆಗಳ ಬಗ್ಗೆ ನಿಮ್ಮ ಅಕ್ಕಪಕ್ಕದವರಿಗೂ ಮಾಹಿತಿ ನೀಡಿ, ಅವರನ್ನೂ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು ಎಂದು ಹೇಳಿದರು.

    ಗ್ರಾಮೀಣ ಭಾಗದಲ್ಲಿನ ಬಡ ರೈತರು ಸ್ಥಳಿಯವಾಗಿದ್ದುಕೊಂಡು ಸ್ವಾಭಿಮಾನದಿಂದ ಜೀವನ ಸಾಗಿಸಲು ಸರ್ಕಾರ ನಿಗಮ ಮತ್ತು ಇಲಾಖೆಗಳ ಮೂಲಕ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಗಂಗಾಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಬೋರ್ವೆಲ್ ಕೊರೆಸುವುದರಿಂದ ಹಿಡಿದು, ಯಂತ್ರಗಳನ್ನು ಅಳವಡಿಸಿ ಕೊಡಲಾಗುತ್ತದೆ. ಇದು ನಿಮ್ಮ ಜಮೀನುಗಳಲ್ಲಿ ನೀರಾವರಿ ವ್ಯವಸ್ಥೆ ಮಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

    ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಕಾರಕ್ಕೆ ಬಂದ ನಂತರ ಹತ್ತಾರು ಹೊಸ ಯೋಜನೆ ಜಾರಿಗೆ ತಂದಿದೆ. ಈ ಹಿಂದೆ ಬಿ.ಎಸ್.ಯಡಿಯೂರಪ್ಪ, ಇದೀಗ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಡವರ ಕಲ್ಯಾಣದ ಕಾರ್ಯಕ್ರಮಗಳು ಅನುಷ್ಠಾನಗೊಳಿಸಲಾಗುತ್ತಿದೆ. ಇವುಗಳ ಲಾಭ ಜನತೆ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

    ಅಕಾರಿಗಳು ಸಹ ಬಡವರ್ಗದ ಜನತೆಗೆ ತಮ್ಮ ಇಲಾಖೆಗಳಲ್ಲಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು. ಇದರಿಂದ ಸಾಕಷ್ಟು ಅನುಕೂಲವಾಗುತ್ತದೆ ಎಂದು ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts