More

    ಯೋಜನೆಗಳ ಲಾಭ ಪಡೆದುಕೊಳ್ಳಿ

    ಯಾದಗಿರಿ: ಸಮಾಜದಲ್ಲಿ ಮನೆ ಮಾಡಿರುವ ಬಾಲಕಾಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ಹೋಗಲಾಡಿಸಲು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ತಿಳಿಸಿದರು.

    ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಕಲ್ಯಾಣ ಕನರ್ಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ ಸಹಯೋಗದಡಿ ಆಯೋಜಿಸಿದ್ದ ಬೀದಿ ನಾಟಕ ಪ್ರದರ್ಶನದಲ್ಲಿ ಮಾತನಾಡಿ, ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ, ಕೂಲಿ ಕೆಲಸಕ್ಕೆ ಕಳಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದರು.

    14 ವರ್ಷದೊಳಗಿನ ಮಕ್ಕಳನ್ನು ಶಾಲೆ ಬಿಡಿಸಿ, ಅಪಾಯಕಾರಿ ಉದ್ಯಮಗಳಲ್ಲಿ ಕೆಲಸಕ್ಕೆ ಹಚ್ಚುವುದು. ಹೊಟೆಲ್, ಗ್ಯಾರೇಜ್ನಲ್ಲಿ ಕೆಲಸ ಮಾಡಿಸುವುದು ಕಾನೂನಿನ ಪ್ರಕಾರ ಅಪರಾಧ. ಈ ಬಗ್ಗೆ ಪಾಲಕರು ಅರ್ಥ ಮಾಡಿಕೊಳ್ಳಬೇಕು. ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ನಾನಾ ಯೋಜನೆ ಜಾರಿಗೆ ತಂದಿದೆ. ಅವುಗಳ ಅದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

    ನಗರಸಭೆ ಮಾಜಿ ಸದಸ್ಯ ಮರೆಪ್ಪ ಚಟ್ಟೇರಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನರಗಸಬೆ ಸದಸ್ಯೆ ಬಸಮ್ಮ ಕುರುಕುಂಬಳ, ಮಹೇಶ ಕುರುಕುಂಬಳ, ಮಲ್ಲಿಕಾಜರ್ುನ ದೇವತ್ಕಲ್, ಕಾಮರ್ಿಕ ನಿರೀಕ್ಷಕ ಗಂಗಾಧರ, ಸಂಸ್ಥೆ ಅಧ್ಯಕ್ಷ ಶರಣು ಕಾಡಂಗೇರಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts