More

    ಯೋಜನೆ ಅನುಷ್ಠಾನಕ್ಕೆ ಸಹಕರಿಸಿ

    ಕಾಗವಾಡ: ಪ್ರಧಾನಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕಿ ವಿತರಿಸುವ ಕಾರ್ಯಕ್ರಮಕ್ಕೆ ಶಾಸಕ ಶ್ರೀಮಂತ ಪಾಟೀಲ ಬುಧವಾರ ಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಚಾಲನೆ ನೀಡಿದರು.

    ಮಾತನಾಡಿ, ಮಕ್ಕಳಲ್ಲಿ ಉಂಟಾಗುವ ಪೌಷ್ಟ್ಟಿಕಾಂಶದ ಕೊರತೆ ನಿವಾರಿಸುವ ಉದ್ದೇಶದಿಂದ ಸರ್ಕಾರ ನೂತನ ಕ್ರಮಕ್ಕೆ ಮುಂದಾಗಿದೆ. ಶಿಕ್ಷಕರು ಹಾಗೂ ಅಧಿಕಾರಿಗಳು ಕಾರ್ಯಕ್ರಮದ ಅನುಷ್ಠಾನಕ್ಕೆ ಸಹಕಾರ ನೀಡಬೇಕು ಎಂದರು.

    ತಹಸೀಲ್ದಾರ್ ರಾಜೇಶ ಬುರ್ಲಿ, ಬಿಇಒ ಮಲ್ಲಪ್ಪ ಮುಂಜೆ, ತಾಲೂಕು ವೈದ್ಯಾಧಿಕಾರಿ ಡಾ.ಪುಷ್ಪಲತಾ ಸುಣ್ಣದಕಲ, ವಿದ್ಯಾರ್ಥಿಗಳಿದ್ದರು.
    ಚಿಕ್ಕೋಡಿ ವರದಿ: ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಬಿಸಿಯೂಟದ ಜತೆಗೆ ವಾರದಲ್ಲಿ ಎರಡು ದಿನ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧರಿಸಿದೆ. ಸರ್ಕಾರದ ಯೋಜನೆ ಪರಿಪೂರ್ಣ ಅನುಷ್ಠಾನಕ್ಕೆ ಶಿಕ್ಷಕರು ಸಹ ಸಾಥ್ ನೀಡಬೇಕು ಎಂದು ಎಸಿ ಸಂತೋಷ ಕಾಮಗೌಡ ಹೇಳಿದರು. ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಪಂ ಬೆಳಗಾವಿ, ತಾಪಂ ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಪ್ರಧಾನಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಡಿಡಿಪಿಐ ಮೋಹನಕುಮಾರ ಹಂಚಾಟೆ, ತಹಸೀಲ್ದಾರ್ ಚಿದಂಬರ ಕುಲಕರ್ಣಿ, ತಾಪಂ ಇಒ ನಿಂಗಪ್ಪ ಮಸಳಿ, ಬಿಸಿಊಟ ಯೋಜನೆ ಸಹಾಯಕ ನಿರ್ದೇಶಕ ಸಂಜೀವ ಹುಲ್ಲೋಳಿ ಇದ್ದರು.

    ಅಥಣಿಗ್ರಾಮೀಣ ವರದಿ: ಕೊಕಟನೂರ ಸಮೀಪದ ಅಡಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆ ಹಣ್ಣುಗಳನ್ನು ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ ಪೂಜಾರಿ ವಿತರಿಸಿದರು. ಹೊನ್ನಪ್ಪ ಹಾದಿಮನಿ, ಎಸ್‌ಡಿಎಂಸಿ ಸದಸ್ಯರಾದ ರಮೇಶ ನಾವಿ, ಸುರೇಶ ಕೋಳಿ, ಹೊನ್ನಪ್ಪ ಹಾದಿಮನಿ, ಮುಖ್ಯಶಿಕ್ಷಕ ಬಿ.ಜಿ.ಸಾತಣ್ಣವರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts