More

    ರಂಗ ಪಂಚಮಿ ಇಂದು

    ಹುಬ್ಬಳ್ಳಿ: ಹೋಳಿ ರಂಗಪಂಚಮಿ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸೂಕ್ಷ್ಮ ಪ್ರದೇಶವಾದ ಕಮರಿಪೇಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಏಪ್ರಿಲ್ 1 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ಸಿಆರ್​ಪಿಸಿ 144 ಕಲಂ ಅನ್ವಯ ನಿಷೇಧಾಜ್ಞೆ ಹೊರಡಿಸಲಾಗಿದೆ.

    ಕಾಳಮ್ಮನ ಅಗಸಿಯಿಂದ ಡಾಕಪ್ಪ ವೃತ್ತದವರೆಗೆ, ಡಾಕಪ್ಪ ವೃತ್ತದಿಂದ ಕೌಲಪೇಟ ಕ್ರಾಸ್​ವರೆಗೆ, ಡಾಕಪ್ಪ ವೃತ್ತದಿಂದ ಹಳೇ ಕೆಇಬಿ ಕಚೇರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇವು ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ. ಮೆರವಣಿಗೆ, ಬೈಕ್ ರ್ಯಾಲಿ, ವಾದ್ಯ ಬಾರಿಸುವುದು, ಘೊಷಣೆ ಕೂಗುವುದು, ಗುಂಪು ಸೇರುವುದು, ಬ್ಯಾನರ್, ಬಂಟಿಂಗ್ ಬಳಕೆ, ಸಭೆ ನಿಷೇಧಿಸಲಾಗಿದೆ. ಹೋಳಿ ಹಬ್ಬ ಆಚರಣೆಗೆ ಒಪ್ಪಿದವರೊಂದಿಗೆ ಮಾತ್ರ ಪುಡಿ ಬಣ್ಣ ಬಳಸಿ ಆಚರಿಸ ಬೇಕು. ಅನುಮತಿ ಇಲ್ಲದೆ ಬಣ್ಣ ಹಚ್ಚಬಾರದು. ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಆಯುಕ್ತ ಲಾಭೂರಾಮ ಎಚ್ಚರಿಕೆ ನೀಡಿದ್ದಾರೆ.

    ಸರ್ಪಗಾವಲು: ಕರೊನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೋಳಿ ಸಂದರ್ಭದಲ್ಲಿ ಮೆರವಣಿಗೆ, ಗುಂಪು ಸೇರುವುದನ್ನು ನಿಷೇಧಿಸಿದೆ. ಹೋಳಿ ಹಬ್ಬದ ವೇಳೆ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸ್ ಸರ್ಪಗಾವಲು ಹಾಕಿದೆ. 3 ಕೆಎಸ್​ಆರ್​ಪಿ ತುಕಡಿ, 10 ಸಿಎಆರ್ ಪಡೆ ಸೇರಿ 2 ಸಾವಿರಕ್ಕೂ ಅಧಿಕ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಿದೆ.

    ಬಸ್ ಸೇವೆ ಎಂದಿನಂತೆ: ಸರಳ ಹೋಳಿ ಆಚರಣೆ ಹಿನ್ನೆಲೆಯಲ್ಲಿ ಏಪ್ರಿಲ್ 1ರಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಎಲ್ಲ ಬಸ್​ಗಳ ಸಂಚಾರ ಎಂದಿನಂತೆ ಇರಲಿದೆ. ತೀರಾ ವಿರಳ ಸಂಖ್ಯೆಯ ಮಾರ್ಗದಲ್ಲಿ ಬಸ್ ಸಂಖ್ಯೆ ಕಡಿಮೆ ಮಾಡಲಾಗುವುದು ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts