More

    ರಕ್ತದಾನಕ್ಕಿಂತ ಶ್ರೇಷ್ಠ ದಾನವಿಲ್ಲ, ಮಾಜಿ ಸಚಿವ ಎಂಟಿಬಿ ನಾಗರಾಜ್ ಅಭಿಮತ, ಅನುಗೊಂಡನಹಳ್ಳಿಯಲ್ಲಿ ರಕ್ತದಾನ ಶಿಬಿರ

    ಬೆಂಗಳೂರು ಗ್ರಾಮಾಂತರ: ರಕ್ತದಾನಕ್ಕಿಂತ ಮಿಗಿಲಾದ ಶ್ರೇಷ್ಠ ದಾನ ಮತ್ತೊಂದಿಲ್ಲ. ಇದಕ್ಕೆ ಬಡವ, ಶ್ರೀಮಂತ ಎಂಬ ಭೇದಭಾವವಿಲ್ಲ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.

    ಅನುಗೊಂಡನಹಳ್ಳಿ ಹೋಬಳಿಯಲ್ಲಿ ಸೋಮವಾರ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ ಅಜಾದ್ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಅಪಘಾತ ಸೇರಿ ಅನೇಕ ಸಂದರ್ಭಗಳಲ್ಲಿ ರಕ್ತದ ಕೊರತೆಯಿಂದ ಜನ ಸಾವನ್ನಪ್ಪುತ್ತಾರೆ. ಇಂತಹ ಸಂದರ್ಭಗಳಲ್ಲಿ ರಕ್ತ ದೊರೆತರೆ ಅನೇಕರ ಪ್ರಾಣ ರಕ್ಷಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಆರೋಗ್ಯವಂತರು ತಪ್ಪದೆ ರಕ್ತದಾನ ಮಾಡಬೇಕು ಎಂದರು.

    ರಕ್ತ ದಾನದ ಬಗ್ಗೆ ಕೆಲವೊಂದು ಅಪನಂಬಿಕೆ, ಅಪಪ್ರಚಾರಗಳಿವೆ. ಅವುಗಳಿಗೆ ಕಿವಿಗೊಡಬಾರದು. ದೈವದತ್ತವಾಗಿ ನೀಡಿದ ಕೊಡುಗೆಯನ್ನು ಮಾನವೀಯ ಮೌಲ್ಯಗಳ ಆಧಾರದ ಮೇಲೆ ಸದ್ವಿನಿಯೋಗ ಮಾಡಬೇಕು ಎಂದು ಕಿವಿಮಾತು ಹೇಳಿದರು.

    ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ ಅಜಾದ್ ನಮ್ಮೆಲ್ಲ ಕೆಚ್ಚೆದೆಯ ಭಾರತೀಯರಿಗೆ ಮಾದರಿಯಾಗಿದ್ದಾರೆ. ಅವರ ಜನ್ಮದಿನದ ಪ್ರಯತ್ನ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಸಂತಸದ ವಿಷಯ ಎಂದರು.

    ಕರೊನಾ ಮಹಾಮಾರಿ ಸಾವಿರಾರು ಜನರನ್ನು ಬಲಿ ತೆಗೆದುಕೊಂಡಿದೆ. ಇಂಥ ಸಂಕಷ್ಟದ ಸಮಯದಲ್ಲಿ ಇನ್ನಿತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ರಕ್ತದ ಕೊರತೆ ಎದುರಾಗಿದೆ. ಇಂಥ ಕ್ಲಿಷ್ಟಕರ ಸಂದರ್ಭದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಂಡು ಜನಪರ ಕಾರ್ಯಕ್ರಮಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದರು.

    ಶಿಬಿರದಲ್ಲಿ 100 ಯುನಿಟ್‌ಗೂ ಹೆಚ್ಚು ರಕ್ತ ಸಂಗ್ರಹವಾಗಿದೆ. ಮುಂದಿನ ದಿನಗಳಲ್ಲಿ ಇಂಥ ಕಾರ್ಯಕ್ರಮಗಳನ್ನು ಮತ್ತಷ್ಟು ಆಯೋಜಿಸಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts