More

    ರಸಗೊಬ್ಬರ, ಬಿತ್ತನೆ ಬೀಜ ದಾಸ್ತಾನು ಮಾಡಿ

    ಮುಂಡಗೋಡ: ತಾಲೂಕಿನಲ್ಲಿ ಮುಂಗಾರು ಪೂರ್ವದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ರಸಗೊಬ್ಬರ, ಬಿತ್ತನೆ ಬೀಜ, ಔಷಧವನ್ನು ಕ್ಷೇತ್ರದ ರೈತರಿಗೆ ಸಾಕಾಗುವಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಬೇಕು ಎಂದು ತಹಸೀಲ್ದಾರ್ ಶ್ರೀಧರ ಮುಂದಲಮನಿ ತಾಲೂಕಿನ ಖಾಸಗಿ ಮತ್ತು ಸಹಕಾರಿ ಸಂಘಗಳ ಕೃಷಿ ಪರಿಕರಗಳ ಮಾರಾಟಗಾರರಿಗೆ ಸೂಚನೆ ನೀಡಿದರು.

    ಪಟ್ಟಣದ ಮಿನಿವಿಧಾನಸೌಧದ ಸಭಾಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಖಾಸಗಿ ಮತ್ತು ಸಹಕಾರಿ ಸಂಘಗಳ ಕೃಷಿ ಪರಿಕರ ಮಾರಾಟಗಾರರ ಸಭೆಯಲ್ಲಿ ಅವರು ಮಾತನಾಡಿದರು.

    ಪರಿಕರ ದರಗಳ ಬೋರ್ಡ್​ಗಳನ್ನು ಅಳವಡಿಸಬೇಕು. ಖರೀದಿಸಿದ ಪರಿಕರಗಳಿಗೆ ಅಧಿಕೃತ ಬಿಲ್​ಗಳನ್ನು ರೈತರಿಗೆ ನೀಡಬೇಕು. ಬೇಡಿಕೆ ಇರುವ ಬೀಜ, ಔಷಧಗಳನ್ನು ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳಬೇಕು. ಅಭಾವ ಸೃಷ್ಟಿಸುವ ಕೆಲಸ ಮಾಡಬಾರದು. ಅಂಗಡಿಗಳಲ್ಲಿ ಗೊಬ್ಬರ, ಬೀಜಗಳ ಸ್ಟಾಕ್ ಇದ್ದರೂ ಇಲ್ಲವೆಂದು ರೈತರಿಗೆ ಹೇಳಬಾರದು. ಸರ್ಕಾರ ನಿಗದಿಪಡಿಸಿದ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಕೂಡದು. ಈ ಬಗ್ಗೆ ರೈತರಿಂದ ದೂರುಗಳು ಕೇಳಿ ಬಂದರೆ ಅಂಥಹ ಮಾರಾಟಗಾರರ ಲೈಸೆನ್ಸ್ ರದ್ದು ಪಡಿಸಲಾಗುವುದು ತಹಸೀಲ್ದಾರ್ ಶ್ರೀಧರ ಮುಂದಲಮನಿ ಎಂದರು. ಈ ವೇಳೆ ಸಹಾಯಕ ಕೃಷಿ ನಿರ್ದೇಶಕ ಎಂ.ಎಸ್. ಕುಲಕರ್ಣಿ ಮತ್ತು ತಾಲೂಕಿನ ಖಾಸಗಿ ಮತ್ತು ಸಹಕಾರಿ ಸಂಘಗಳ ಕೃಷಿ ಪರಿಕರಗಳ ಮಾರಾಟಗಾರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts