More

    ರಸ್ತೆ ಅಪಘಾತ ತಡೆಗೆ ಅರಿವು ಮೂಡಿಸಿ

    ಕಲಬುರಗಿ: ಅಪಘಾತ ಪ್ರಕರಣ ನಿಯಂತ್ರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕಲಬುರಗಿ ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಸೂಚಿಸಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಲಾಕ್ಡೌನ್ ಸಂದರ್ಭದಲ್ಲಿ ಅಪಘಾತ ಸಂಖ್ಯಾ ಪ್ರಕರಣಗಳು ಇಳಿಮುಖವಾಗಬೇಕಿತ್ತು, ಆದರೆ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು.
    ರಸ್ತೆ ಸುರಕ್ಷತೆ ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚು ಅರಿವು ಮೂಡಿಸಬೇಕು. ಆಯಾ ಇಲಾಖೆಯವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟ್ವಿಟರ್, ವಾಟ್ಸಾಪ್ಗಳಲ್ಲಿ ಜಾಗೃತಿ ಸಂದೇಶ ನೀಡಬೇಕು. ಪೋಸ್ಟರ್, ಡಿಜಿಟಲ್ ಮಾಹಿತಿಯನ್ನು ಕಾಲೇಜು ವಿದ್ಯಾಥರ್ಿಗಳ ವಾಟ್ಸಾಪ್ ಗ್ರೂಪ್ಗಳಿಗೆ ತಲುಪುವಂತಾಗಬೇಕು. ಈ ಮೂಲಕ ಯುವಕರಲ್ಲಿ ಹೆಚ್ಚು ಅರಿವು ಮೂಡಿಸಬಹುದು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
    ಈಗಾಗಲೇ 120 ಅಪಘಾತ ವಲಯ ಗುರುತಿಸಲಾಗಿದೆ. ಆದರೆ, ಇವುಗಳಲ್ಲಿ ಕಪ್ಪು ಸ್ಥಳ (ಬ್ಲಾಕ್ಸ್ಪಾಟ್) ಕುರಿತು ಸಂಬಂಧಿಸಿದ ಎಲ್ಲಾ ಇಲಾಖೆಗಳು ಸೇರಿ ಜಂಟಿಸಮೀಕ್ಷೆ ಮಾಡಿ ಗುರುತಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಂಬಂಧಿತ ಇಲಾಖೆಗಳಾದ ಲೋಕೋಪಯೋಗಿ, ಪ್ರಾದೇಶಿಕ ಸಾರಿಗೆ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಸೇರಿ ಒಂದು ವಾರದಲ್ಲಿ ಚಚರ್ಿಸಿ ಬ್ಲಾಕ್ಸ್ಪಾಟ್ ಗುರುತಿಸಬೇಕು ಎಂದು ತಿಳಿಸಿದರು.
    ಪಿಡಬ್ಲೂಡಿ ಇಂಜಿನಿಯರ್ ಮಲ್ಲಿಕಾಜರ್ುನ ಜೇರಟಗಿ ಮಾತನಾಡಿ, ಈವರೆಗೂ ಜಿಲ್ಲೆಯಲ್ಲಿ 120 ಅಪಘಾತ ವಲಯ ಗುರುತಿಸಲಾಗಿದೆ. ಇವುಗಳಲ್ಲಿ ಎಷ್ಟು ಬ್ಲಾಕ್ಸ್ಪಾಟ್ ಇವೆ ಎಂಬುದನ್ನು ಜಂಟಿ ಸಮೀಕ್ಷೆ ನಡೆಸಿ ಪತ್ತೆಹಚ್ಚಿ ಕ್ರಿಯಾಯೋಜನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯಂ ಜಾಜರ್್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾಗಳಲ್ಲಿ ಇರುವ ಆಂಬ್ಯುಲೆನ್ಸ್ ಹಾಗೂ ಅಪಘಾತಕ್ಕೀಡಾದ ವಾಹನಗಳನ್ನು ಸಾಗಿಸುವ ವಾಹನಗಳ ವಿವರಗಳನ್ನು ಮುಂದಿನ ಸಭೆಯಲ್ಲಿ ನೀಡುವಂತೆ ಸೂಚಿಸಿದರು.
    ಡಿಸಿಪಿ ಕಿಶೋರ ಬಾಬು, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಡಿ. ನೂರ ಮಹಮ್ಮದ್ ಪಾಷಾ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts