More

    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

    ಗೋಣಿಕೊಪ್ಪ: ಮಾಯಮುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರುದ್ರಬೀಡು-ಮಾರಿಯಮ್ಮ ಕಾಲನಿ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಜಿ.ಬೋಪಯ್ಯ ಭೂಮಿಪೂಜೆ ನೆರವೇರಿಸಿದರು.

    ನಂತರ ಮಾತನಾಡಿ, ಕಾವೇರಿ ನೀರಾವರಿ ನಿಗಮದಿಂದ 90 ಲಕ್ಷ ರೂ.ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತ್ತಿದೆ. ಆ ಮೂಲಕ ಕಾಲನಿ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.
    ಮಹಾತ್ಮ ಗಾಂಧಿ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಮೋದಿ ಸರ್ಕಾರ ಬಡವರು, ದೀನ ದಲಿತರ ಏಳಿಗೆಗಾಗಿ ಹಲವು ಯೋಜನೆಗಳನ್ನು ನೀಡುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಚೇತರಿಸಿಕೊಳ್ಳುವ ಉದ್ದೇಶ ಇದರ ಹಿಂದಿದೆ ಎಂದರು.

    ಗ್ರಾ.ಪಂ.ಅಧ್ಯಕ್ಷೆ ಎಂ.ಪಿ.ಮೀನಾ, ಸದಸ್ಯರಾದ ಚೆಪ್ಪುಡೀರ ಪ್ರದೀಪ್ ಪೂವಯ್ಯ, ಸಿದ್ದಪ್ಪ, ನಾರಾಯಣ, ಸರಸ್ವತಿ, ಸುಶೀಲಾ, ಕಾವೇರಿ ನಿರಾವರಿ ನಿಗಮದ ಇಂಜಿನಿಯರ್ ನವೀನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts