More

    ರಸ್ತೆ ಗುಂಡಿ ಮುಚ್ಚಿದ ಶಾಲೆ ಸಿಬ್ಬಂದಿ: ಸಾರ್ವಜನಿಕರ ಮೆಚ್ಚುಗೆಗೆ ಪಾತ್ರ

    ಮಾಗಡಿ: ಪಟ್ಟಣದ ವಾಸವಿ ಶಾಲೆ ಮುಂಭಾಗದ ರಸ್ತೆ ಗುಂಡಿಮಯವಾಗಿದ್ದು, ದುರಸ್ತಿಗೊಳಿಸುವಂತೆ ಪುರಸಭೆ ಅಧಿಕಾರಿಗಳಲ್ಲಿ ಮಾಡಿಕೊಂಡ ಮನವಿಗೆ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಶಾಲೆಯ ಸಿಬ್ಬಂದಿಯೇ ಗುಂಡಿ ಮುಚ್ಚಿ ಜನರಿಗೆ ಅನುಕೂಲ ಮಾಡಿಕೊಟ್ಟರು.
    ಪಟ್ಟಣದ ವಾಸವಿ ಶಾಲೆಗೆ ತಾಲೂಕಿನಾದ್ಯಂತ ಸಾವಿರಾರು ಮಕ್ಕಳು ವಿದ್ಯಾಭ್ಯಾಸಕ್ಕೆ ಬರುತ್ತಾರೆ. ಈ ರಸ್ತೆಯಲ್ಲಿ ಗುಂಡಿ ಬಿದ್ದು ಮಕ್ಕಳನ್ನು ಶಾಲೆಗೆ ಬಿಡಲು ಬರುವ ಪಾಲಕರು ಮತ್ತು ವಿದ್ಯಾರ್ಥಿಗಳು ವಾಹನದಿಂದ ಬಿದ್ದು ಗಾಯಗೊಳ್ಳುತ್ತಿದ್ದರು. ರಸ್ತೆ ಕಿರಿದಾಗಿರುವುದರಿಂದ, ಗುಂಡಿ ತಪ್ಪಿಸುವ ಪ್ರಯತ್ನದಲ್ಲಿ ಅಪಘಾತಗಳಿಗೆ ತುತ್ತಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ
    ತೇಪೆ ಹಾಕಿ ಗುಂಡಿ ಮುಚ್ಚುವಂತೆ ಶಾಲೆಯ ಸಿಬ್ಬಂದಿ ಪುರಸಭೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು.ಆದರೆ, ಇದಕ್ಕೆ ಪುರಸಭೆ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಕ್ಕಿರಲಿಲ್ಲ.ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಹಿಡಿಶಾಪ ಹಾಕಿಕೊಂಡೇ ಸ್ಥಳೀಯರು ಈ ರಸ್ತೆಯಲ್ಲಿ ಓಡಾಡುತ್ತಿದ್ದರು. ಆದರೆ, ವಾಸವಿ ಶಾಲೆ ಸಿಬ್ಬಂದಿ ಭಾನುವಾರ ರಸ್ತೆ ಗುಂಡಿ ಮುಚ್ಚುವ ಕಾರ್ಯ ಮಾಡಿ, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.

     

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts