More

    ರಾಜೀವಗಾಂಧಿ ಆಯುರ್ವೆದ ಆಸ್ಪತ್ರೆ ಈಗ ಸಿಸಿಸಿ

    ರೋಣ: ತಾಲೂಕಿನಲ್ಲಿ ಕರೊನಾ ಸೋಂಕಿತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ಅವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರೋಣದ ರಾಜೀವಗಾಂಧಿ ಆಯುರ್ವೆದ ಆಸ್ಪತ್ರೆಯನ್ನು ಕೋವಿಡ್ ಆರೈಕೆ ಕೇಂದ್ರವನ್ನಾಗಿ ಮಾಡಲಾಗಿದೆ. ಮೇ 31ರಂದು ಹಾಲಕೆರೆ ಅಭಿನವ ಅನ್ನದಾನ ಸ್ವಾಮಿಗಳಿಂದ ಉದ್ಘಾಟನೆಗೊಳ್ಳಲಿದೆ ಎಂದು ಮಾಜಿ ಶಾಸಕ, ಗದಗ ಜಿಲ್ಲಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಜಿ.ಎಸ್. ಪಾಟೀಲ ಹೇಳಿದರು.

    ಪಟ್ಟಣದ ರಾಜೀವಗಾಂಧಿ ಆಯುರ್ವೆದ ವೈದ್ಯಕೀಯ ಮಹಾವಿದ್ಯಾಲಯದ ಸಭಾಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಆರೈಕೆ ಕೇಂದ್ರದಲ್ಲಿ ಒಟ್ಟು 50 ಬೆಡ್​ಗಳಿದ್ದು, ಎಲ್ಲಾ ಬೆಡ್​ಗಳನ್ನು ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತವಾಗಿ ಮೀಸಲಿಡಲಾಗಿದೆ ಎಂದರು.

    50 ಬೆಡ್​ಗಳಲ್ಲಿ 5 ವೆಂಟಿಲೇಟರ್, 25 ಆಕ್ಸಿಜನ್, 20 ಬೆಡ್​ಗಳಲ್ಲಿ ಸೋಂಕಿನ ತೀವ್ರತೆ ಕಡಿಮೆ ಇರುವವರಿಗೆ ಚಿಕಿತ್ಸೆ ನೀಡಲಾಗುತ್ತದೆ. ಅಲ್ಲದೆ, ಕೋವಿಡ್ ಆರೈಕೆ ಕೇಂದ್ರದಲ್ಲಿ ಸೋಂಕಿತರ ಚಿಕಿತ್ಸೆಗೆ ನುರಿತ ತಜ್ಞ ವೈದ್ಯರನ್ನು ನಿಯುಕ್ತಿಗೊಳಿಸಲಾಗಿದ್ದು, ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಕೇಂದ್ರಕ್ಕೆ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸುತ್ತಾರೆ. 10 ಮಂದಿ ನರ್ಸ್​ಗಳಿದ್ದಾರೆ. ಸೋಂಕಿತರಿಗೆ ಊಟ, ಔಷಧವನ್ನು ಉಚಿತವಾಗಿ ಒದಗಿಸಲಾಗುತ್ತದೆ ಎಂದರು.

    ರಾಜೀವಗಾಂಧಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ ಐ.ಬಿ. ಕೊಟ್ಟೂರಶೆಟ್ಟರ್, ಕಾಂಗ್ರೆಸ್ ಕಮಿಟಿ ಜಿಲ್ಲಾ ಉಪಾಧ್ಯಕ್ಷ ವಿ.ಬಿ. ಸೋಮನಕಟ್ಟಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts