More

    ರಾಜ್ಯಕ್ಕೆ ಅರಸು ಕೊಡುಗೆ ಅಪಾರ

    ಶಿರಹಟ್ಟಿ: ದಿ.ಡಿ. ದೇವರಾಜ ಅರಸು ಅವರು ಮುಖ್ಯಮಂತ್ರಿ ಯಾಗಿದ್ದಾಗ ರಾಜ್ಯಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅವರು ಹಿಂದುಳಿದ ವರ್ಗದವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹಾನ್ ನೇತಾರ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

    ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 1 ಕೋಟಿ ರೂ. ವೆಚ್ಚದಲ್ಲಿ ನಿರ್ವಿುಸಿದ ದಿ. ದೇವರಾಜ ಅರಸು ಭವನವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

    ಪಜಾ, ಪಪಂ, ಹಿಂದುಳಿದ ವರ್ಗಗಳ ಮಕ್ಕಳ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಿದೆ. ಶಿಕ್ಷಣದೊಂದಿಗೆ ವಸತಿ ಸೌಲಭ್ಯ ಕಲ್ಪಿಸಲು ಹಾಸ್ಟೆಲ್​ಗಳನ್ನು ನಿರ್ವಿುಸಿದೆ. ಮಕ್ಕಳು ಸರ್ಕಾರದ ಸೌಲಭ್ಯಗಳನ್ನು ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಶಿರಹಟ್ಟಿಗೆ ಮಂಜೂರಾದ 100 ಹಾಸಿಗೆ ಸಾಮರ್ಥ್ಯ ಆಸ್ಪತ್ರೆ ನಿರ್ವಣಕ್ಕೆ ಭೂಮಿ ನೀಡಲು ರೈತರು ಮುಂದೆ ಬಂದಿದ್ದಾರೆ. ಭೂಮಿ ಖರೀದಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆರೋಗ್ಯ ಸಚಿವರಿಂದ ಅನುಮೋದನೆ ದೊರೆತ ಬಳಿಕ ಸುಸಜ್ಜಿತ ಕಟ್ಟಡ ನಿರ್ವಣಕ್ಕೆ ಚಾಲನೆ ನೀಡಲಾಗುವುದು. ನ್ಯಾಯಾಲಯ, ಅಗ್ನಿಶಾಮಕ ಠಾಣೆ ಕಟ್ಟಡ ನಿರ್ವಣಕ್ಕೂ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

    ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರತ್ನಮ್ಮ ಹೊಸಮನಿ, ಬಿಜೆಪಿ ಶಿರಹಟ್ಟಿ ಮಂಡಲ ಅಧ್ಯಕ್ಷ ಫಕೀರೇಶ ರಟ್ಟಿಹಳ್ಳಿ, ಪಪಂ ಮಾಜಿ ಅಧ್ಯಕ್ಷ ನಾಗರಾಜ ಲಕ್ಕುಂಡಿ ಮಾತನಾಡಿದರು.

    ತಾಪಂ ಸದಸ್ಯ ತಿಪ್ಪಣ್ಣ ಕೊಂಚುಗೇರಿ, ದೇವಪ್ಪ ಲಮಾಣಿ, ಸಿ.ಸಿ. ನೂರಶೆಟ್ಟರ್, ರಾಮಣ್ಣ ಡಂಬಳ, ತಿಮ್ಮರಡ್ಡಿ ಅಳವಂಡಿ, ಪಪಂ ಸದಸ್ಯ ಸಂದೀಪ ಕಪ್ಪತ್ತನವರ, ಅನಿಲ ಮಾನೆ, ಜಾನು ಲಮಾಣಿ, ಸಿಪಿಐ ವಿಕಾಸ ಲಮಾಣಿ, ಪಿಎಸ್​ಐ ಎಸ್.ಎನ್.

    ನಾಯಕ, ಅಶೋಕ ಪಾಟೀಲ, ಸಿ.ಕೆ. ಮುಳಗುಂದ, ತಿಮ್ಮರಡ್ಡಿ ಮರಡ್ಡಿ, ಪಪಂ ಮುಖ್ಯಾಧಿಕಾರಿ ಮಲ್ಲೇಶ ಎಂ, ಇತರರಿದ್ದರು. ಬಸವರಾಜ ಬಳ್ಳಾರಿ ಕಾರ್ಯಕ್ರಮ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts