More

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ

    ಚಿತ್ರದುರ್ಗ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಎಂಎಲ್‌ಸಿ ಭಾರತಿಶೆಟ್ಟಿ ದೂರಿದರು.
    ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕೊಲೆ, ಸುಲಿಗೆಗಳು, ಮಹಿಳೆಯರ ಮೇಲಿನ ದೌರ್ಜನ್ಯಗಳು, ಸೈಬರ್ ಇತ್ಯಾದಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳನ್ನು ನಿಯಂತ್ರಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
    ಜೈಶ್ರೀರಾಮ್ ಎಂದವರ ಮೇಲೆ ಹಲ್ಲೆಯಾಗುತ್ತದೆ. ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿದ, ಸಾಮೂಹಿಕ ಅತ್ಯಾಚಾರದಂಥ ಘಟನೆಗಳಾಗುತ್ತಿವೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆಯಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ಸ್ಫೋಟವಾಗಿದ್ದು, ಭಯೋತ್ಪಾದನೆ, ಮತೀಯ ಗೂಂಡಾಗಿರಿ ಹೆಚ್ಚುತ್ತಿದೆ ಎಂದು ತಿಳಿಸಿದರು.
    ವಿದ್ಯಾರ್ಥಿನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಂದಿನ ನಡೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ಅಲ್ಪಂಸಂಖ್ಯಾತರ ತುಷ್ಠೀಕರಣದಲ್ಲಿ ನಿರತವಾಗಿದೆ ಎಂದು ದೂರಿದರು.
    ವಿದೇಶದಲ್ಲಿರುವ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ರೂ.ಹಾಕುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲೂ ಹೇಳಿಲ್ಲ. ಪ್ರತಿಯೊಬ್ಬರಿಗೂ 15 ಲಕ್ಷ ರೂ. ಹಂಚುವಷ್ಟು ಕಪ್ಪು ಹಣ ವಿದೇಶದಲ್ಲಿ ಇದೆ ಎಂದು ಪ್ರಧಾನಿ ಹೇಳಿದ್ದು. ಆದರೆ, ಕಾಂಗ್ರೆಸ್ ಈ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ ಎಂದರು.
    ಗ್ಯಾರಂಟಿಗಳು ಅಸಮರ್ಪಕವಾಗಿ ಜಾರಿಯಾಗಿವೆ. ಮೀನು ಕೊಡದೆ ಮೀನು ಹಿಡಿಯವುದನ್ನು ಕಲಿಸಬೇಕು. ಸುಳ್ಳನ್ನೇ ಬಂಡವಾಳ ಮಾಡಿಕೊಂಡಿದೆ ಎಂದು ಹೇಳಿದರು.
    ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣಿಸಿರುವ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಸವಾಲು ಹಾಕಿದರು. ಶೈಲಜಾ ರೆಡ್ಡಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts