More

    ರಾಜ್ಯದಲ್ಲಿ ಬಿಜೆಪಿಗೆ 22-24 ಸ್ಥಾನ ಪಕ್ಕಾ – ಡಾ.ಪ್ರಭಾಕರ ಕೋರೆ

    ಮಾಂಜರಿ: ಎಲ್ಲ ಕಡೆಗೂ ಬಿಜೆಪಿ ಅಲೆ ಇದ್ದು, ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಮತ್ತು ಬೆಳಗಾವಿ ಸೇರಿ ರಾಜ್ಯದಲ್ಲಿ 22 ರಿಂದ 24 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ರಾಜ್ಯಸಭಾ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿದ್ದಾರೆ.

    ತಾಲೂಕಿನ ಅಂಕಲಿಯ ಸರ್ಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿ ಸುದ್ದಿಗಾರ ರೊಂದಿಗೆ ಅವರು ಮಾತನಾಡಿದರು. ಚಿಕ್ಕೋಡಿ ಮತ್ತು ಬೆಳಗಾವಿ ಎರಡೂ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪರ ವಾತಾವರಣವಿದೆ.

    ಕೇಂದ್ರ ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೂ ತಲುಪಿವೆ. ಹೀಗಾಗಿ ಸಾರ್ವಜನಿಕರು ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತ ಚಲಾಯಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಜಗದೀಶ ಶೆಟ್ಟರ್ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಅಣ್ಣಾಸಾಹೇಬ ಜೊಲ್ಲೆ ಅತಿ ಹೆಚ್ಚು ಮತಗಳ ಅಂತರದಿಂದ ಆಯ್ಕೆಯಾಗುತ್ತಾರೆ. ನರೇಂದ್ರ ಮೋದಿ ದೇಶದ ಭವಿಷ್ಯ ಬದಲಾಯಿಸುತ್ತಾರೆ.

    ಬಿಜೆಪಿಯಿಂದ ಜನರಿಗೆ ಒಳ್ಳೆಯದಾಗುತ್ತದೆ. ಬಡವರು, ರೈತರು, ಮಹಿಳೆಯರು ಮತ್ತು ಕೂಲಿಕಾರ್ಮಿಕರ ಪರವಾದ ಕಾರ್ಯಕ್ರಮಗಳನ್ನು ಬಿಜೆಪಿ ಕೊಟ್ಟಿದೆ. ಹಾಗಾಗಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅಭಿಪ್ರಾಯಪಟ್ಟರು.

    ಆಶಾತಾಯಿ ಪ್ರಭಾಕರ ಕೋರೆ, ಗ್ರಾಪಂ ಸದಸ್ಯ ತುಕಾರಾಮ ಪಾಟೀಲ, ತಾಪಂ ಮಾಜಿ ಸದಸ್ಯ ಸುರೇಶ ಪಾಟೀಲ, ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ, ಪಿಂಟು ಹಿರೇಕುರುಬರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts