More

    ರಾಜ್ಯದಲ್ಲಿ ಭಾಜಪಾ ಮತ್ತೆ ಅಧಿಕಾರಕ್ಕೇರಲಿದೆ

    ಚಿಕ್ಕೋಡಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕೋಡಿ-ಸದಲಗಾ ಸೇರಿ 140ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

    ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ವಿಜಯ ಸಂಕಲ್ಪ ಯಾತ್ರೆ ಸಮಾರಂಭವನ್ನುದ್ದೇಶಿಸಿ ಮಾತನಾಡಿ, ಪಕ್ಷದ ವಿಜಯ ಸಂಕಲ್ಪ ಯಾತ್ರೆಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ. ಹೆಚ್ಚಿನ ಸೀಟು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೇರಲಿದೆ. ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ವೇ ಮಾಡಿ ಆಯಾ ಕ್ಷೇತ್ರದ ಶಾಸಕರ ಕಾರ್ಯ ವೈಖರಿ ನೋಡಿ ಕೇಂದ್ರದಿಂದ ತಂಡ ರಚಿಸಿ ಪೂರ್ಣ ಮಾಹಿತಿ ಸಂಗ್ರಹಿಸಿ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದರ.ಈಗಾಗಲೇ ತ್ರಿಪುರಾ, ನಾಗಾ ಲ್ಯಾಂಡ್ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ವಿರೋಧ ಪಕ್ಷದ ಹಲವು ನಾಯಕರು ತಮ್ಮ ಠೇವಣಿ ಕಳೆದುಕೊಂಡಿದ್ದಾರೆ ಎಂದರು. ರಾಹುಲ್ ಗಾಂಧಿ ವಿದೇಶಕ್ಕೆ ಹೋದಲ್ಲೆಲ್ಲ ಭಾರತವನ್ನು ತೆಗಳಲು ವೇದಿಕೆ ಬಳಸಿಕೊಳ್ಳುತ್ತಿದ್ದು, ಆ ವ್ಯಕ್ತಿತ್ವ ತಿದ್ದಿಕೊಂಡು ದೇಶದ ಜನರ ಕ್ಷಮೆಯಾಚಿಸಬೇಕು ಎಂದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಕೃಷ್ಣಾ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 10 ಸಾವಿರ ರೂ ಹಾಗೂ ಪ್ರಥಮ ಬಾರಿಗೆ ಎನ್‌ಡಿಆರ್‌ಎ್ ಮಾರ್ಗಸೂಚಿಗೂ ಮೀರಿ 5 ಲಕ್ಷ ರೂ. ಅನುದಾನ ನೀಡಿದ್ದೇನೆ ಎಂದು ಸ್ಮರಿಸಿದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ರೈತರಿಗೆ ಕಷಿ ಸಮ್ಮಾನ ಯೋಜನೆಯಡಿ ತಲಾ 10 ಸಾವಿರ ರೂ. ಹಾಗೂ ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ತಂದಿದ್ದು ಬಿಜೆಪಿ. ಜನಪರ ಯೋಜನೆಗಳ ಜಾರಿಗೆ ಪಕ್ಷವನ್ನು ಮರು ಆಯ್ಕೆ ಮಾಡಬೇಕು ಎಂದು ಕೇಳಿಕೊಂಡರು. ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ಪ್ರವಾಹ ಸಂದರ್ಭದಲ್ಲಿ ಮಾಂಜರಿ,
    ಇಂಗಳಿ ಹಾಗೂ ಯಡೂರ ಗ್ರಾಮಗಳಲ್ಲಿ ಮನೆಕಳೆದುಕೊಂಡ 3546 ಲಾನುಭವಿಗಳಿಗೆ ತಲಾ 5 ಲಕ್ಷ ರೂ. ಸರ್ಕಾರ ಬಿಡುಗಡೆ ಮಾಡಿದೆ. ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಗೆ 203 ಕೋಟಿ ರೂ .ಮೊದಲ ಹಂತದ ಕಾಮಗಾರಿಗೆ ಬಿಡುಗಡೆ ಮಾಡಲಾಗಿದೆ ಎಂದರು. ಸಚಿವೆ ಶಶಿಕಲಾ ಜೊಲ್ಲೆ, ಗೋವಿಂದ ಕಾರಜೋಳ, ಶಾಸಕರಾದ ರಮೇಶ ಜಾರಕಿಹೊಳಿ, ಮಾಜಿ ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆ, ಲಕ್ಷ್ಮಣ ಸವದಿ, ಎನ್.ರವಿಕುಮಾರ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಅರುಣ ಶಹಾಪುರ, ಶಶಿಕಾಂತ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ, ಉಜ್ವಲಾ ಬಡವನಾಚೆ, ಶಾಂಭವಿ ಅಶ್ವತ್ಥಪುರ, ಸತೀಶ ಅಪ್ಪಾಜಿಗೋಳ, ದುಂಡಪ್ಪ ಬೆಂಡವಾಡೆ ಇತರರು ಇದ್ದರು. ಸುರೇಶ ಉಕ್ಕಲಿ ನಿರೂಪಿಸಿದರು. ಸಂಜಯ ಪಾಟೀಲ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts