More

    ರಾಜ್ಯದ ಜನರ ಧ್ವನಿಯಾಗಲಿದೆ ಪ್ರಜಾಧ್ವನಿ ಬಸ್ ಯಾತ್ರೆ

    ಚಿಕ್ಕಮಗಳೂರು: ರಾಜ್ಯದಲ್ಲಿ ಕಾಂಗ್ರೆಸ್​ನಿಂದ ನಡೆಯುತ್ತಿರುವ ಪ್ರಜಾಧ್ವನಿ ಬಸ್ ಯಾತ್ರೆ ಜನರ ಧ್ವನಿಯಾಗಲಿದೆ ಎಂದು ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್ ಹೇಳಿದರು.

    ಜ.21ರಂದು ಚಿಕ್ಕಮಗಳೂರಿನಲ್ಲಿ ನಡೆಯುವ ಪ್ರಜಾಧ್ವನಿ ಬಸ್ ಯಾತ್ರೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಕಾಂಗ್ರೆಸ್​ನಿಂದ ಈಗಾಗಲೇ ಮಾಡಿರುವ ಭಾರತ್ ಜೋಡೋ, ಸ್ವಾತಂತ್ರ್ಯ ನಡಿಗೆ, ಎಸ್ಸಿ, ಎಸ್ಟಿ ಸಮಾವೇಶ, ಮಹದಾಯಿ ಹೋರಾಟ, ನಾ ನಾಯಕಿ ಸಮಾವೇಶ ಯಶಸ್ವಿಯಾಗಿವೆ. ಪ್ರಜಾಧ್ವನಿ ಬಸ್ ಯಾತ್ರೆಗೂ ಎಲ್ಲ ಜಿಲ್ಲೆಗಳಲ್ಲಿ ಅಭೂತಪೂರ್ವ ಸ್ವಾಗತ ದೊರೆಯುತ್ತಿದೆ ಎಂದು ಹೇಳಿದರು.

    ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಆರಂಭವಾಗಿದ್ದು, ಆ ಅಲೆ ಯಶಸ್ವಿಯಾಗಬೇಕಾದರೆ ಸಾಮಾನ್ಯ ಕಾರ್ಯಕರ್ತರಿಂದ ರಾಷ್ಟ್ರ ಮಟ್ಟದ ನಾಯಕರವರೆಗೂ ಶ್ರಮವಹಿಸಿ ಕೆಲಸ ಮಾಡಬೇಕಿದೆ. ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಅಧಿಕವಾಗಿದ್ದು, ವಿವಿಧ ರೀತಿಯಲ್ಲಿ ಸರ್ವೆ ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಯಾರಿಗೇ ಟಿಕೆಟ್ ನೀಡಿದರೂ ಎಲ್ಲರೂ ಒಗ್ಗೂಡಿ ಪಕ್ಷದ ಗೆಲುವಿಗೆ ಸಹಕರಿಸಬೇಕು. ಜ.21ರಂದು ನಡೆಯುವ ಪ್ರಜಾಧ್ವನಿ ಬಸ್ ಯಾತ್ರೆಗೆ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ತಿಳಿಸಿ ಸಭೆಗೆ ಜನರನ್ನು ಕರೆ ತರಬೇಕು ಎಂದು ತಿಳಿಸಿದರು.

    ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಮಾತನಾಡಿ, ಪ್ರಜಾಧ್ವನಿ ಬಸ್ ಯಾತ್ರೆ ಮೂಲಕ ಜನಜಾಗೃತಿ ಮೂಡಿಸುವ ಜತೆಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts